2026-06-25 02:08:40

Commits suicide after not finding a girl to marry | ಮದುವೆಯಾಗಲು ಹುಡುಗಿ ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಜೈಲು ವಾರ್ಡರ್ | Speed News Kannada

Commits suicide after not finding a girl to marry | ಮದುವೆಯಾಗಲು ಹುಡುಗಿ ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಜೈಲು ವಾರ್ಡರ್ | Speed News Kannada

ಬೆಳಗಾವಿ: ಬೆಳಗಾವಿ ಜಿಲೆಯ ಹಿಂಡಲಗಾ ಕಾರಾಗೃಹದ ವಾರ್ಡರ್ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ನಿವಾಸಿ ವಿನೋದ ಭೀಮಪ್ಪ ತಿಗಡಿ (31) ಮೃತ ವ್ಯಕ್ತಿ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವಾರ್ಡರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಇದ್ದಕ್ಕಿದ್ದಂತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಇತ್ತೀಚೆಗಷ್ಟೇ ವಿನೋದ್ ಹೊಸ ಮನೆ ಕೂಡ ಕಟ್ಟಿಸಿದ್ದರು. ವಿನೋದ್ ಮದುಗಾಗಿ ಮನೆಯಲ್ಲಿ ಹುಡುಗಿ ಹುಡುಕುತ್ತಿದ್ದರು. ಆದರೆ ಎಷ್ಟೇ ಪ್ರಯತ್ನ ಮಾಡಿದರೂ ಹುಡುಗಿ ಸಿಗುತ್ತಿರಲಿಲ್ಲ. ಇದರಿಂದ ತೀವ್ರವಾಗಿ ಮನನೊಂದಿದ್ದರು ಎನ್ನಲಾಗಿದೆ. ಜೀವನದಲ್ಲಿ ಜಿಗುಪ್ಪೆಗೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗಾವಿ ಚನ್ನಮ್ಮ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.