2026-03-07 07:10:20

Complaint filed for duping a young woman | ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ 25 ಲಕ್ಷ ರೂ. ಮಕ್ಮಲ್ ಟೋಪಿ ನಾಲ್ವರ ವಿರುದ್ಧ ದೂರು ದಾಖಲು | Speed News Kannada

Complaint filed for duping a young woman | ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ 25 ಲಕ್ಷ ರೂ. ಮಕ್ಮಲ್ ಟೋಪಿ ನಾಲ್ವರ ವಿರುದ್ಧ ದೂರು ದಾಖಲು | Speed News Kannada

ಬೆಂಗಳೂರು, ಮಾರ್ಚ್ 04: ಯುವತಿಗೆ MBBSಸೀಟ್ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಲಕ್ಷ ರೂಪಾಯಿ ಹಣವನ್ನು ವಂಚಿಸಿರುವ ಆರೋಪ ಬೆಂಗಳೂರಲ್ಲಿ ಕೇಳಿ ಬಂದಿದೆ. ಆಯೇಷಾ ಖಥುಮ್ ಎಂಬಾಕೆಗೆ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಡಾ.ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಶಂಶೇರ್ ಬೇಗ್, ಸೈಯದ್ ತಬ್ರೇಜ್ ಮೂಲಕ ಸಂತ್ರಸ್ತ ಯುವತಿಗೆ ಡಾ.ಶರತ್ ಪರಿಚಯವಾಗಿದ್ದು ಕಿಮ್ಸ್ ಕಾಲೇಜಿನಲ್ಲಿ ಸೀಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ BNS 318(4), 318(2) ಸೇರಿ ಒಟ್ಟು 8 ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿದೆ. 

ದೂರಿನಲ್ಲಿ ಇರೋದೇನು?
ವಂಚನೆ ಬಗ್ಗೆ ಆಯೇಷಾ ಖಥುಮ್ ಅವರ ತಂದೆ ಲಾಲ್ ಬಾಬು ಅವರ ದೂರಿನಂತೆ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ. ದ್ವಿತೀಯ ಪಿಯುಸಿ ಮತ್ತು NLT ಪರೀಕ್ಷೆಗಳನ್ನು ಬರೆದಿದ್ದ ಯುವತಿ MBBSಗೆ ಸೇರಿಕೊಳ್ಳುವ ಬಗ್ಗೆ ಯೋಚಿಸಿ, ಒಳ್ಳೆಯ ಕಾಲೇಜಿನಲ್ಲಿ ಸೀಟ್‌ಗಾಗಿ ಪ್ರಯತ್ನಿಸುತ್ತಿದ್ದರು. ಈ ನಡುವೆ ಪರಿಚಯದ ಸೈಯದ್ ತಬ್ರೇಜ್ ಮೂಲಕ ಶಂಶೇರ್ ಬೇಗ್ ಎಂಬಾತನ ಪರಿಚಯವಾಗಿತ್ತು. ಈತ ತನಗೆ ಕಿಮ್ಸ್ ಮೆಡಿಕಲ್ ಕಾಲೇಜಿನ ಪ್ರೆಸಿಡೆಂಟ್ ಪರಿಚಯವಿರುವುದಾಗಿ ಹೇಳಿ ಡಾ. ಶರತ್ ಕೆ.ಪಿ. ಎಂಬುವವರನ್ನು ಪರಿಚಯಿಸಿದ್ದ. ಅದರಂತೆ ಬನಶಂಕರಿ 2ನೇ ಹಂತದಲ್ಲಿನ ಕಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಶರತ್‌ನ ಭೇಟಿಯಾಗಿದ್ದರು. ಈ ವೇಳೆ ಇದೇ ಕಾಲೇಜಿನಲ್ಲಿ ಆಯೇಷಾ ಖಥುಮ್‌ ಗೆ ಸೀಟ್ ಕೊಡಿಸೋದಾಗಿ ನಂಬಿಸಿ ಶೈಕ್ಷಣಿಕ ದಾಖಲೆಗಳನ್ನು ಪಡೆಯಲಾಗಿತ್ತು ಎನ್ನಲಾಗಿದೆ.
ನಂತರ ಹೋಟೆಲ್ ಒಂದರಲ್ಲಿ ಭೇಟಿಯಾಗಿದ್ದ ಆರೋಪಿಗಳು ಡೊನೇಶನ್ ಆಗಿ 25 ಲಕ್ಷ ಹಣ ಕೊಟ್ಟರೆ ಸೀಟ್ ಪಕ್ಕಾ ಎಂದಿದ್ದರು. ಇವರ ಮಾತು ನಂಬಿ ಯುವತಿ ಕಡೆಯವರು ಹಂತ ಹಂತವಾಗಿ ಯುಪಿಐ, ಚೆಕ್ ರೂಪದಲ್ಲಿ 10 ಲಕ್ಷ ರೂ. ಹಣ ನೀಡಿದ್ದಾರೆ. ಬಳಿಕ ಆರೋಪಿಗಳ ಡಿಮ್ಯಾಂಡ್ ಹಿನ್ನೆಲೆ ಉಳಿದವ 15 ಲಕ್ಷವನ್ನ ನಗದು ರೂಪದಲ್ಲಿ ನೀಡಲಾಗಿದೆ. ಪೂರ್ತಿ ಹಣ ಕೈಸೇರಿದ ಮೇಲೆ ಆರೋಪಿಗಳು ತಮ್ಮ ಅಸಲಿ ರೂಪ ತೋರಿಸಿದ್ದು, ಮೆಡಿಕಲ್ ಸೀಟ್ ಕೊಡಿಸದೇ ವಂಚಿಸಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಡಾ. ಕೆ.ಪಿ ಶರತ್ ಎಂಬ ವ್ಯಕ್ತಿ ಕಿಮ್ಸ್ ಕಾಲೇಜಿನ ಪ್ರೆಸಿಡೆಂಟ್ ಅಲ್ಲ ಎಂಮಬ ವಿಚಾರ ಬಯಲಾಗಿದೆ. ಅಂತಿಮವಾಗಿ ತಾವು ಮೋಸ ಹೋಗಿದ್ದು ಅರಿತ ಯುವತಿ ಕಡೆಯವರು ಈ ಬಗ್ಗೆ ಪೊಲೀಸರ ಮೊರೆ ಹೋಗಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.