2026-03-07 06:23:23

Congress is spreading the wrong message | ವಿಬಿಜಿ ರಾಮ್ ಜಿ ಕಾಯ್ದೆ ಕಾಂಗ್ರೆಸ್ ತಪ್ಪು ಸಂದೇಶ ಹರಡುತ್ತಿದೆ ಸಚಿವ ಪ್ರಹ್ಲಾದ ಜೋಶಿ | Speed News Kannada

Congress is spreading the wrong message | ವಿಬಿಜಿ ರಾಮ್ ಜಿ ಕಾಯ್ದೆ ಕಾಂಗ್ರೆಸ್ ತಪ್ಪು ಸಂದೇಶ ಹರಡುತ್ತಿದೆ ಸಚಿವ ಪ್ರಹ್ಲಾದ ಜೋಶಿ | Speed News Kannada

ಹುಬ್ಬಳ್ಳಿ: 'ವಿಬಿಜಿ ರಾಮ್ ಜಿ ಕಾಯ್ದೆ' ಬಗ್ಗೆ  ದೇಶದ ಜನಕ್ಕೆ ಕಾಂಗ್ರೆಸ್ ತಪ್ಪು ಸಂದೇಶ ಕೊಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಹುಬ್ಬಳ್ಳಿಯ ಅರವಿಂದ ನಗರದಲ್ಲಿರವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 'ವಿಬಿಜಿ ರಾಮ್ ಜಿ' ಕುರಿತು ಮಾತನಾಡಿದರು.
ಈ ಹಿಂದೆ ಮನರೇಗಾದಲ್ಲಿ ಅನುದಾನ ಸೋರಿಕೆ ದೊಡ್ಡ ಪ್ರಮಾಣದಲ್ಲಿತ್ತು. ಭ್ರಷ್ಟಾಚಾರ ವ್ಯಾಪಕವಾಗಿತ್ತು. ಅಲ್ಲದೆ, ನಕಲಿ ಜಾಬ್ ಕಾರ್ಡ್ಗಳನ್ನು ಸಹ ಸೃಷ್ಟಿಸಲಾಗ್ತಿತ್ತು. ಇದೀಗ ಇದೆಲ್ಲದಕ್ಕೂ ಬ್ರೇಕ್ ಬೀಳಲಿದೆ. ಆ ಕಾರಣಕ್ಕೆ ಕಾಂಗ್ರೆಸ್ ತಗಾದೆ ತೆಗೆಯುತ್ತಿದೆ ಎಂದು ಆರೋಪಿಸಿದರು.
ಎನ್ ಡಿ ಎ ಸರ್ಕಾರ ಜಾರಿ ತಂದ ವಿಬಿ-ಜಿ ರಾಮ್ ಜಿ ಯೋಜನೆ ಮೂಲಕ ಗ್ರಾಮೀಣ ಭಾಗದ ಜನರಿಗೆ 125 ದಿನಗಳ ಉದ್ಯೋಗ ಖಾತರಿ ದೊರೆಯಲಿದೆ. AI-ಚಾಲಿತ ಮೇಲ್ವಿಚಾರಣೆ, ಬಯೋಮೆಟ್ರಿಕ್‌ ಹಾಜರಾತಿ ಮತ್ತು ಡಿಜಿಟಲ್‌ ಲೆಕ್ಕಪರಿಶೋಧನೆಗಳೊಂದಿಗೆ ಈಗ ಸಂಪೂರ್ಣ ಪ್ರಕ್ರಿಯೆ ಪಾರದರ್ಶಕವಾಗಲಿದೆ. ವಿಬಿ-ಜಿ ರಾಮ್ ಜಿ ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಲಿದೆ. ಅಲ್ಲದೆ, ಗ್ರಾಮೀಣ ಭಾರತದ ಆರ್ಥಿಕತೆಗೆ ಹೊಸ ಶಕ್ತಿ ನೀಡಲಿದೆ ಮತ್ತು ವಿಕಸಿತ ಭಾರತ ನಿರ್ಮಾಣಕ್ಕೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಪ್ರತಿಪಾದಿಸಿದರು.
‎ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ, ಪರಿಷತ್ ಸದಸ್ಯ ಎಸ್.ವಿ.ಸಂಕನೂರು, ಕೇಶವ ಪ್ರಸಾದ, ಮಾಜಿ ವಿಧಾನ ಪರಿಷತ್ ಸದಸ್ಯ ನಾಗರಾಜ ಛಬ್ಬಿ, ಉಪಸ್ಥಿತರಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.