2026-06-08 01:25:39

Congress Leader Attacked By Men Wearing Taltars | ಕಾಂಗ್ರೆಸ್ ಮುಖಂಡನ ಮೇಲೆ ತಲ್ಟಾರ್ ಧಾರಿಗಳಿಂದ ಹಲ್ಲೆ- ಬೆಚ್ಚಿಬಿದ್ದ ಉಡುಪಿ! | Speed News Kannada

Congress Leader Attacked By Men Wearing Taltars | ಕಾಂಗ್ರೆಸ್ ಮುಖಂಡನ ಮೇಲೆ ತಲ್ಟಾರ್ ಧಾರಿಗಳಿಂದ ಹಲ್ಲೆ- ಬೆಚ್ಚಿಬಿದ್ದ ಉಡುಪಿ! | Speed News Kannada

ಉಡುಪಿ : ಕೃಷ್ಣನಗರಿ ಉಡುಪಿಯಲ್ಲಿ ಮಚ್ಚು ಹಾಗೂ ಲಾಂಗು ಸದ್ದು ಮಾಡಿದ್ದು, ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದೆ.ನಗರದ ಪಿಪಿಸಿ ಕ್ರಾಸ್ ಬಳಿ ದಾಳಿ ನಡೆಸಲಾಗಿದ್ದು, ಮಾತುಕತೆಗೆಂದು ಕರೆಸಿ ಅಟ್ಯಾಕ್ ಮಾಡಲಾಗಿದೆ.
NSUI ಉಪಾಧ್ಯಕ್ಷ ಶರತ್ ಕುಂದರ್ ಗಂಭೀರ ಗಾಯಗೊಂಡಿದ್ದು, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಮಣಿಪಾಲ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿರುವ ಮಾಹಿತಿ ಇದೆ.
ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿನಿಂದ ದಾಳಿ ನಡೆಸಿ ಕೊಲೆ ಯತ್ನ ನಡೆಸಿದ್ದಾರೆ. ಜೊತೆಗೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿಬಂದಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಖಾಕಿ ಹುಡುಕಾಟ ನಡೆಸುತ್ತಿದ್ದು, ಘಟನೆ ಸಂಬಂಧ ತನಿಖೆ ಮುಂದುವರಿದಿದೆ. ರಾಜಕೀಯ ಕಾರಣವೂ ಒಳಗೊಂಡಂತೆ ವೈಯಕ್ತಿಕ ದ್ವೇಷಕ್ಕೆ ಅಟ್ಯಾಕ್ ನಡೆದಿದೆ ಎಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.