2026-06-25 03:58:44

Congress MLA Vinay Kulkarnis fate to be decided today|ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ|Speed News Kannada

Congress MLA Vinay Kulkarnis fate to be decided today|ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ|Speed News Kannada

ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ ಒಟ್ಟು 21 ಆರೋಪಿಗಳ ಭವಿಷ್ಯವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಇಂದು ನಿರ್ಧರಿಸಲಿದೆ. 2016ರಲ್ಲಿ ನಡೆದ ಈ ಹೈಪ್ರೊಫೈಲ್ ಕೊಲೆ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿತ್ತು. ಜೈಲಿನಲ್ಲಿದ್ದ ಅವಧಿಯಲ್ಲೇ ಚುನಾವಣೆಯಲ್ಲಿ ಜಯಗಳಿಸಿದ್ದ ಯೋಗೇಶ್‌ಗೌಡ ಅವರ ಹತ್ಯೆ ಪ್ರಕರಣದಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿನಯ್‌ ಕುಲಕರ್ಣಿ ಅವರ ಹೆಸರು ಕೇಳಿಬಂದಿದ್ದು ಪ್ರಕರಣಕ್ಕೆ ರಾಜಕೀಯ ತಿರುವು ನೀಡಿತ್ತು.

ಈ ಸುದೀರ್ಘ ಕಾನೂನು ಹೋರಾಟದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು 15ನೇ ಆರೋಪಿಯಾಗಿದ್ದು (A-15), ಕೆಲವು ಪೊಲೀಸ್ ಅಧಿಕಾರಿಗಳು ಕೂಡ ತನಿಖೆಯ ವ್ಯಾಪ್ತಿಗೆ ಒಳಪಟ್ಟಿದ್ದಾರೆ. ಕೊಲೆಗೆ ನಿಖರವಾದ ಕಾರಣ ಮತ್ತು ಅದಕ್ಕೆ ಪೂರಕವಾದ ಹಲವು ಪ್ರಮುಖ ಸಾಕ್ಷ್ಯಗಳನ್ನು ಸಿಬಿಐ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಿದೆ. ಸುದೀರ್ಘ ವಿಚಾರಣೆಯ ನಂತರ ನ್ಯಾಯಾಲಯವು ಇಂದು ನೀಡಲಿರುವ ತೀರ್ಪು ಶಾಸಕ ವಿನಯ್ ಕುಲಕರ್ಣಿ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.