2026-06-08 03:53:24

Congress protests against PM Modi | ಇಂಧನ ಬೆಲೆ ಏರಿಕೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರಸ್‌ ಪ್ರತಿಭಟನೆ | Speed News Kannada

Congress protests against PM Modi | ಇಂಧನ ಬೆಲೆ ಏರಿಕೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರಸ್‌ ಪ್ರತಿಭಟನೆ | Speed News Kannada

ಬೆಂಗಳೂರು: ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂಇಐ ಅಧ್ಯಕ್ಷ ಎಸ್. ಮನೋಹರ್, ವಕ್ತಾರ ಆನಂದ್ ಕುಮಾರ್ ಎಂ ಎಸ್ ಮೊದಲಾದವರು ಭಾಗವಹಿಸಿದ್ದರು.
ಪ್ರತಿಭಟನಾಕಾರರು ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಘೋಷನೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ ₹60 ಹಾಗೂ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು ₹115 ರಷ್ಟು ಹೆಚ್ಚಳ ಮಾಡಿರುವುದು ದೇಶದ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಮತ್ತೊಂದು ಭಾರೀ ಹೊರೆ ಹಾಕಿದಂತಾಗಿದೆ. ಈಗಾಗಲೇ ದುಬಾರಿ ಬೆಲೆಯಿಂದ  ಸಂಕಷ್ಟದಲ್ಲಿರುವ ಸಾಮಾನ್ಯ ಜನತೆಗೆ ಈ ನಿರ್ಧಾರ ದೊಡ್ಡ ಹೊಡೆತವಾಗಿದೆ.
ಚುನಾವಣೆಯ ಮುನ್ನ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಅವಶ್ಯಕ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಿ ನಂತರ ಬೆಲೆ ಏರಿಕೆ ಮಾಡುವುದು ನರೇಂದ್ರ ಮೋದಿ ರವರ ತಂತ್ರಗಾರಿಕೆಯಾಗಿದೆ. 2014ರಿಂದ 2025ರ ಅವಧಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆಗಳಲ್ಲಿ ಸಂಭವಿಸಿರುವ ನಿರಂತರ ಏರಿಕೆ ಸಾಮಾನ್ಯ ಕುಟುಂಬಗಳ ಜೀವನವನ್ನು ದುಬಾರಿಯಾಗಿಸಿದೆ ಎಂದು ಕಾಂಗ್ರೆಸ್‌ ತಿಳಿಸಿದೆ. 
ಸಬ್ಸಿಡಿ ವ್ಯವಸ್ಥೆಯನ್ನು ಕ್ರಮೇಣ ಕಡಿಮೆ ಮಾಡುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಸರ್ಕಾರ ಆರ್ಥಿಕ ಹೊರೆ ಹಾಕಿರುವುದು ಅತ್ಯಂತ ಖಂಡನೀಯ. ಅದೇ ರೀತಿ ವಿದೇಶಾಂಗ ಮತ್ತು ಆರ್ಥಿಕ ನೀತಿಗಳ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವು ದಿನೇ ದಿನೇ ದುರ್ಬಲವಾಗುತ್ತಿರುವುದು ಆತಂಕಕಾರಿಯಾಗಿದೆ ಹಾಗೂ  ಇದರಿಂದ ದೇಶದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದೂ ತಿಳಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.