2026-06-08 01:25:39

Congress Sitting MLA K Y Nanjegowda Wins | ಮಾಲೂರು ಕ್ಷೇತ್ರ ಮರುಎಣಿಕೆ ಕಾಂಗ್ರೆಸ್‌ ಹಾಲಿ ಶಾಸಕ ಕೆ ವೈ ನಂಜೇಗೌಡಗೆ ಗೆಲುವು | Speed News Kannada

Congress Sitting MLA K Y Nanjegowda Wins | ಮಾಲೂರು ಕ್ಷೇತ್ರ ಮರುಎಣಿಕೆ ಕಾಂಗ್ರೆಸ್‌ ಹಾಲಿ ಶಾಸಕ ಕೆ ವೈ ನಂಜೇಗೌಡಗೆ ಗೆಲುವು | Speed News Kannada

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮತಗಳ ಮರುಎಣಿಕೆಯಲ್ಲಿ ಕಾಂಗ್ರೆಸ್‌ ಪಕ್ಷದ ಹಾಲಿ ಶಾಸಕ ಕೆ.ವೈ. ನಂಜೇಗೌಡ ಅವರಿಗೆ ಗೆಲುವು ದಕ್ಕಿದೆ. ಮತಗಳ ಮರುಎಣಿಕೆ ನಡೆಸಿದ ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್ಗೆ ವರದಿ ಸಲ್ಲಿಸಿದ್ದರು.
ಸುಪ್ರೀಂಕೋರ್ಟ್ ಫಲಿತಾಂಶವನ್ನು ಬಹಿರಂಗಗೊಳಿಸಿದೆ. ಮರು ಎಣಿಕೆಯಲ್ಲಿ ನಂಜೇಗೌಡ ಅವರಿಗೆ 50,957 ಮತಗಳು ಮತ್ತು ಬಿಜೆಪಿ ಅಭ್ಯರ್ಥಿಮಂಜುನಾಥಗೌಡ ಅವರಿಗೆ 50,707  ಮತಗಳು ಚಲಾವಣೆಯಾಗಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ ಎಂದು ಸುಪ್ರೀಂಕೋರ್ಟ್ ಪ್ರಕಟಿಸಿದೆ.
2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ವಿರುದ್ಧ ಕಾಂಗ್ರೆಸ್ನ ಕೆ.ವೈ.ನಂಜೇಗೌಡ 248 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಆದರೆ, ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿದ್ದ ಮಂಜುನಾಥ್ ಗೌಡ  ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಕೋರ್ಟ್ ಸೂಚನೆಯಂತೆ ನವೆಂಬರ್ 11ರಂದು ಮರು ಎಣಿಕೆ ನಡೆದಿತ್ತು. ಬಳಿಕ ಫಲಿತಾಂಶವನ್ನು ಚುನಾವಣಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.