2026ನೇ ಸಾಲಿನ ಕರ್ನಾಟಕ KSEAB SSLC ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಎಲ್ಲಾ ವಿದ್ಯರ್ಥಿಗಳು ಫಲಿತಾಂಶ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ. ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿದ್ದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಅಧಿಕೃತ ಘೋಷಣೆ ಹೊರಬೀಳಲಿದೆ. ಹಿಂದಿ ಭಾಷೆ ಗ್ರೇಡಿಂಗ್ ಬದಲು ಅಂಕ ನೀಡಲು ಹೈಕೋರ್ಟ್ ಸೂಚನೆ ನೀಡಿದ್ದು, ಗ್ರೇಡಿಂಗ್ ವ್ಯವಸ್ಥೆ ಸೇರಿದಂತೆ ಪರೀಕ್ಷಾ ನಿಯಮಗಳಲ್ಲಿ ಯಾವುದೇ ಮಾರ್ಪಾಡುಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಮಾತ್ರ ಜಾರಿಗೆ ತರಬಹುದು ಎಂದು ನ್ಯಾಯಾಲಯ ಒತ್ತಿ ಹೇಳಿದೆ. ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಅಥವಾ SMS ಸೇವೆಗಳ ಮೂಲಕವೂ ಪ್ರವೇಶಿಸಲು ಸಾಧ್ಯವಾಗುತ್ತದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಅರ್ಹತೆ ಪಡೆಯಲು, ಅಭ್ಯರ್ಥಿಗಳು ಪ್ರತಿ ವಿಷಯದಲ್ಲೂ ಮಂಡಳಿಯು ನಿಗದಿಪಡಿಸಿದ ಕನಿಷ್ಠ ಉತ್ತೀರ್ಣ ಅಂಕಗಳನ್ನು ಪಡೆಯಬೇಕು.