2026-04-24 12:22:06

CSK heavy defeat, Prashant Veer no chance is discussed |CSK ಭಾರೀ ಸೋಲು, ಪ್ರಶಾಂತ್ ವೀರ್‌ಗೆ ಅವಕಾಶ ಇಲ್ಲದ ಚರ್ಚೆ|Speed News Kannada

CSK heavy defeat, Prashant Veer no chance is discussed |CSK ಭಾರೀ ಸೋಲು, ಪ್ರಶಾಂತ್ ವೀರ್‌ಗೆ ಅವಕಾಶ ಇಲ್ಲದ ಚರ್ಚೆ|Speed News Kannada

ಐಪಿಎಲ್ 2026ರ ಮೊದಲ ಪಂದ್ಯದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ಭಾರೀ ಸೋಲು ಅನುಭವಿಸಿದ್ದು, ನಾಯಕತ್ವ ಮತ್ತು ತಂಡದ ಆಯ್ಕೆ ಕುರಿತು ಪ್ರಶ್ನೆಗಳು ಎದ್ದಿವೆ. ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ತಂಡ ಕೇವಲ 127 ರನ್‌ಗಳಿಗೆ ಆಲೌಟ್ ಆಗಿ, ರಾಜಸ್ಥಾನ್ ರಾಯಲ್ಸ್ ತಂಡ 12.1 ಓವರ್‌ಗಳಲ್ಲಿ ಗುರಿ ಮುಟ್ಟಿತು.

ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆ ದೊಡ್ಡ ತಪ್ಪು ಎಂದು ವಿಶ್ಲೇಷಣೆ, 14.20 ಕೋಟಿ ಮೌಲ್ಯದ ಆಲ್‌ರೌಂಡರ್ ಪ್ರಶಾಂತ್ ವೀರ್‌ಗೆ ಅವಕಾಶ ನೀಡದಿರುವುದು ಚರ್ಚೆಗೆ ಗ್ರಾಸವಾಗಿದೆ. ಮಹೇಂದ್ರ ಸಿಂಗ್ ಧೋನಿ ನಂತರದ ನಾಯಕತ್ವದ ಬಗ್ಗೆ ಪ್ರಶ್ನೆಗಳು ಹೆಚ್ಚಿದ್ದು, ಮುಂದಿನ ಪಂದ್ಯದಲ್ಲಿ ತಂಡ ಯಾವ ಬದಲಾವಣೆ ಮಾಡಲಿದೆ ಎಂದು ಅಭಿಮಾನಿಗಳ ಕಣ್ಣು ಇತ್ತ ಕಡೆ ಹರಿಯುತ್ತಿದೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.