2026-03-07 07:29:50

culprit arrested in hdfc bank theft case SpeedNewsKannada

culprit arrested in hdfc bank theft case SpeedNewsKannada

ಬೆಂಗಳೂರು: ನಗರದ ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಮತ್ತು ಕಬ್ಬನ್ ಪೇಟೆಯ ಹೆಚ್.ಡಿ.ಎಫ್.ಸಿ ಎಟಿಎಂನಲ್ಲಿ ಕಳ್ಳತನ ಮಾಡಲು ಪ್ರಯತ್ನಸಿದ್ದ ಆರೋಪಿಯನ್ನು ಶೇಷಾದ್ರಿಪುರಂ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತನನ್ನು ಶೇಷಾದ್ರಿಪುರಂ ನಿವಾಸಿ ಹಸನ್ ಸಾಬ್ ಎಂದು ಗುರುತಿಸಲಾಗಿದೆ. ಈತ ಶನಿವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಹಸನ್ ಸಾಬ್, ಶೇಷಾದ್ರಿಪುರಂನ ಕೆನರಾ ಬ್ಯಾಂಕ್‌ನ ಗ್ರಿಲ್ ಕಟ್ ಮಾಡಿ ಒಳಗೆ ನುಗ್ಗಲು ಪ್ರಯತ್ನ ನಡೆಸಿದ್ದ. ಆದರೆ, ಬ್ಯಾಂಕ್‌ ನಲ್ಲಿದ್ದ ಸೆಕ್ಯೂರಿಟಿ ಸೈರನ್ ಮೊಳಗಿದ್ದರಿಂದ ಗಾಬರಿಗೊಂಡು ಅಲ್ಲಿಂದ ಪರಾರಿಯಾಗಿದ್ದ.
ನಂತರವೂ ಆರೋಪಿ ಕಬ್ಬನ್‌ಪೇಟೆಯಲ್ಲಿರುವ ಹೆಚ್.ಡಿ.ಎಫ್.ಸಿ ಬ್ಯಾಂಕ್ ಎಟಿಎಂನಲ್ಲೂ ಕಳ್ಳತನಕ್ಕೆ ಪ್ರಯತನ ನಡೆಸಿದ್ದ. ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ದಾಖಲೆಗಳ ಆಧಾರದ ಮೇಲೆ ಶೇಷಾದ್ರಿಪುರಂ ಪೊಲೀಸರು ಹಸನ್ ಸಾಬ್ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಾಲವನ್ನು ತೀರಿಸಲು ಕಳ್ಳತನ ಮಾಡಲು ಪ್ರಯತ್ನಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.