2026-06-13 03:26:55

Cylinder issue Bangalore Hotel Association moves High Court | ಸಿಲಿಂಡ‌ರ್ ಸಮಸ್ಯೆ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್ | Speed News Kannada

Cylinder issue Bangalore Hotel Association moves High Court | ಸಿಲಿಂಡ‌ರ್ ಸಮಸ್ಯೆ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್ | Speed News Kannada

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆಯಿಂದಾಗಿ ಹೋಟೆಲ್ ಉದ್ಯಮಗಳು ಸಂಕಷ್ಟಕ್ಕೆ ಸಿಲುಕಿವೆ. ಸಿಲಿಂಡ‌ರ್ ಸಿಗದೇ ಹಲವು ಹೋಟೆಲ್‌ಗಳು ಈಗಾಗಲೇ ಬಾಗಿಲು ಮುಚ್ಚಿವೆ. ಇನು ಹಲವು ಹೋಟೆಲ್ ಗಳಲ್ಲಿ ಮೆನು ಕಡಿತಗೊಳಿಸಲಾಗಿದೆ. ಕೆಲ ಹೋಟೆಲ್ ಗಳು ಸೌದೆ ಒಲೆಯಲ್ಲಿ ಅಡುಗೆ ತಯಾರಿಸಿ ಪರದಾಡುವ ಸ್ಥಿತಿ ಬಂದಿದೆ. ಸಿಲಿಂಡ‌ರ್ ಬಿಕ್ಕಟ್ಟಿಗೆ ಪರಿಹಾರ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ. ಹೋಟೆಲ್ ಗಳಿಗೆ ಸಿಲಿಂಡರ್ ಗಳ ಅಭಾವದಿಂದಾಗಿ ಬೆಂಗಳೂರಿನಲ್ಲಿ 40 ಸಾವಿರ ಹೋಟೆಲ್‌ಗಳು ಮತ್ತು 6 ಲಕ್ಷ ಕಾರ್ಮಿಕರ ಭವಿಷ್ಯ ಅತಂತ್ರವಾಗಿದ್ದು, ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.
ವಾಣಿಜ್ಯ ಸಿಲಿಂಡರ್‌ಗಳ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಹೋಟೆಲ್ ಉದ್ಯಮ ನಷ್ಟ ಅನುಭವಿಸುತ್ತಿವೆ. ಈ ಸ್ಥಿತಿ ಹೀಗೆ ಮುಂದುವರಿದರೆ ಉಳಿದ ಹೋಟೆಲ್ ಗಳು ಬಾಗಿಲು ಮುಚ್ಚುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗಾಗಿ ಹೈಕೋರ್ಟ್ ಮೆಟ್ಟಿಲೇರಿದೆ. ಹೋಟೆಲ್‌ಗಳಿಗೆ ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್‌ನಿಂದ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳನ್ನು ಪ್ರತಿವಾದಿಯನ್ನಾಗಿಸಿ ಅರ್ಜಿ ಸಲ್ಲಿಸಲಾಗಿದ್ದು, ಹೋಟೆಲ್ ಮುಚ್ಚಿರುವುದರಿಂದ ಹಾಲು ಮತ್ತು ತರಕಾರಿ ಮಾರಾಟಗಾರರಿಗೂ ತೊಂದರೆ ಆಗಿದೆ. 40 ಸಾವಿರ ಹೋಟೆಲ್, 6 ಲಕ್ಷ ಕಾರ್ಮಿಕರಿಗೆ ಸಮಸ್ಯೆಯಾಗಿದೆ. ಹೀಗಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಅಸೋಸಿಯೇಷನ್ ಪರ ವಕೀಲ ಕೆ.ಸತೀಶ್ ಭಟ್ ಅರ್ಜಿ ಸಲ್ಲಿಸಿದ್ದಾರೆ. ಹೋಟೆಲ್ ಉದ್ಯಮಕ್ಕೆ 1 ಸಾವಿರ ಸಿಲಿಂಡರ್‌ಗಳನ್ನು ಪೂರೈಸುವುದಾಗಿ ಸಚಿವ ಮುನಿಯಪ್ಪ ಹೇಳಿದ್ದರೂ, ಸಚಿವರ ಭರವಸೆ ಬಗ್ಗೆ, ಬೆಂಗಳೂರಿನ ಹೋಟೆಲ್ ಮಾಲೀಕರು ಅಸಮಾಧಾನ ಹೊರಹಾಕಿದ್ದಾರೆ. 40 ಸಾವಿರ ಹೋಟೆಲ್‌ಗಳಿಗೆ ಒಂದು ಸಾವಿರ ಸಿಲಿಂಡರ್ ಕೊಡುವ ಬದಲು, ಕೊಡದೆ ಇರುವುದೇ ಒಳ್ಳೆಯದು. ಹೋಟೆಲ್‌ಗಳ ಮಾಲಕರು ಮಾತ್ರವಲ್ಲದೆ ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಮತ್ತು ಅವರ ಕುಟುಂಬದ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.