2026-04-23 11:01:43

cylinder price hike gift of modi govt ; lakshmi hebbalkar Speed News Kannada

cylinder price hike gift of modi govt ; lakshmi hebbalkar Speed News Kannada

ಬೆಂಗಳೂರು: ಮಹಿಳಾ ದಿನಾಚರಣೆಯ ಉಡುಗೊರೆಯಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ ಡಿಎ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ  60, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ₹115 ಏರಿಕೆ ಮಾಡಲಾಗಿದೆ. ಕಳೆದ 11 ತಿಂಗಳಲ್ಲಿ ಗೃಹ ಬಳಕೆಯ ಸಿಲಿಂಡರ್ ಬೆಲೆ ಒಟ್ಟು ರೂ.110 ಹೆಚ್ಚಳ ಮಾಡಿರುವುದು ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳ ಮೇಲೆ ಭಾರೀ ಹೊರೆ ಹಾಕಿದಂತಾಗಿದೆ ಎಂದು ತಿಳಿಸಿದ್ದಾರೆ.
ಅಗತ್ಯ ವಸ್ತುವಿನ ಬೆಲೆ ಹೆಚ್ಚಿಸುವುದು ಮಹಿಳೆಯರ ಮೇಲೆ ಮತ್ತಷ್ಟು ಆರ್ಥಿಕ ಒತ್ತಡ ತರುವ ಕ್ರಮವಾಗಿದೆ. ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುವ ಕೇಂದ್ರ ಸರ್ಕಾರ ಮಹಿಳೆಯರ ದಿನದಂದೇ ಇಂತಹ ನಿರ್ಧಾರ ಕೈಗೊಂಡಿರುವುದು ಅತ್ಯಂತ ವಿಷಾದಕರ ಎಂದು ಅವರು ಕಿಡಿ ಕಾರಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಸದಾ ಆರೋಪ ಮಾಡುವ ಬಿಜೆಪಿ ನಾಯಕರು ಈಗ ಉತ್ತರಿಸಬೇಕು. ಈ ಬೆಲೆ ಏರಿಕೆಯನ್ನು ಅವರು ಸಮರ್ಥಿಸಿಕೊಳ್ಳುತ್ತಾರೆಯೇ? ಅಥವಾ ಬಡವರ ಮತ್ತು ಮಹಿಳೆಯರ ಪರವಾಗಿ ಧ್ವನಿ ಎತ್ತುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರವು ತಕ್ಷಣವೇ ಈ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆದು ಜನರಿಗೆ, ವಿಶೇಷವಾಗಿ ಮಹಿಳೆಯರಿಗೆ ಉಂಟಾಗಿರುವ ಆರ್ಥಿಕ ಭಾರವನ್ನು ಕಡಿಮೆ ಮಾಡಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.