ನವದೆಹಲಿ: ಇರಾನ್-ಇಸ್ರೇಲ್ ಯುದ್ಧ ಆರಂಭವಾದ ಬೆನ್ನಲ್ಲೇ ಗೃಹಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಿದ್ದು, ಗೃಹಬಳಕೆಯ ಸಿಲಿಂಡರ್ ರೂ.60 ಮತ್ತು ವಾಣಿಜ್ಯ ಸಿಲಿಂಡರ್ ಬೆಲೆ ರೂ.115 ಏರಿಕೆಯಾಗಿದೆ.
ಕಳೆದ ಒಂದು ವರ್ಷದಿಂದ ಬೆಲೆ ಏರಿಕೆಯಾಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿತ್ತು. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷ ಬೆಲೆ ಏರಿಕೆಗೆ ಕಾರಣವಾಗಿದೆ.
ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ಉದ್ದಿಮೆದಾರರಿಗೆ ದೊಡ್ಡ ಹೊಡೆತ ಬಿದ್ದಿದ್ದು, ಹೋಟೆಲ್ ಗಳು ಆಹಾರ ಉತ್ಪನ್ನಗಳ ಬೆಲೆಯನ್ನು ಏರಿಸಬಹುದು ಎಂದು ನಿರೀಕ್ಷಿಸಲಾಗಿದೆ.
ಹಾರ್ಮುಜ್ ಜಲಸಂಧಿಯ ಮೂಲಕ ನಡೆಯುವ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಗೆ ಕಾರಣವಾಗಿದೆ. ಭಾರತವು ತನ್ನ ತೈಲ ಅಗತ್ಯಕ್ಕಾಗಿ ಮದ್ಯ ಪ್ರಾಚ್ಯ ದೇಶಗಳ್ನನೇ ಅವಲಂಬಿಸಿದೆ.
ಕೇಂದ್ರ ಪೆಟ್ರೋಲಿಯಂ ಸಚಿವ ಹರ ದೀಪ್ ಸಿಂಗ್ ಪುರಿ ಪ್ರತಿಕ್ರಿಯಿಸಿ ದೇಶದ ಇಂಧನ ಪೂರೈಕೆ ಕುರಿತು ಆತಂಕ ಪಡಬೇಕಿಲ್ಲ ಎಂದು ಹೇಳಿದ್ದಾರೆ.