2026-06-08 03:53:44

Cylinder prices increase | ಯುದ್ಧದ ಎಫೆಕ್ಟ್ ಗೃಹ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಹೆಚ್ಚಳ | Speed News Kannada

Cylinder prices increase | ಯುದ್ಧದ ಎಫೆಕ್ಟ್ ಗೃಹ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಹೆಚ್ಚಳ | Speed News Kannada

ನವದೆಹಲಿ:  ಇರಾನ್‌-ಇಸ್ರೇಲ್ ಯುದ್ಧ ಆರಂಭವಾದ ಬೆನ್ನಲ್ಲೇ ಗೃಹಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಿದ್ದು, ಗೃಹಬಳಕೆಯ ಸಿಲಿಂಡರ್ ರೂ.60 ಮತ್ತು ವಾಣಿಜ್ಯ ಸಿಲಿಂಡರ್ ಬೆಲೆ ರೂ.115 ಏರಿಕೆಯಾಗಿದೆ.
ಕಳೆದ ಒಂದು ವರ್ಷದಿಂದ ಬೆಲೆ ಏರಿಕೆಯಾಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿತ್ತು. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷ ಬೆಲೆ ಏರಿಕೆಗೆ ಕಾರಣವಾಗಿದೆ. 
ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ಉದ್ದಿಮೆದಾರರಿಗೆ ದೊಡ್ಡ ಹೊಡೆತ ಬಿದ್ದಿದ್ದು, ಹೋಟೆಲ್‌ ಗಳು ಆಹಾರ ಉತ್ಪನ್ನಗಳ ಬೆಲೆಯನ್ನು ಏರಿಸಬಹುದು ಎಂದು ನಿರೀಕ್ಷಿಸಲಾಗಿದೆ.
ಹಾರ್ಮುಜ್ ಜಲಸಂಧಿಯ ಮೂಲಕ ನಡೆಯುವ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಗೆ ಕಾರಣವಾಗಿದೆ. ಭಾರತವು ತನ್ನ ತೈಲ ಅಗತ್ಯಕ್ಕಾಗಿ ಮದ್ಯ ಪ್ರಾಚ್ಯ ದೇಶಗಳ್ನನೇ ಅವಲಂಬಿಸಿದೆ.
ಕೇಂದ್ರ ಪೆಟ್ರೋಲಿಯಂ ಸಚಿವ ಹರ ದೀಪ್ ಸಿಂಗ್ ಪುರಿ ಪ್ರತಿಕ್ರಿಯಿಸಿ ದೇಶದ ಇಂಧನ ಪೂರೈಕೆ ಕುರಿತು ಆತಂಕ ಪಡಬೇಕಿಲ್ಲ ಎಂದು ಹೇಳಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.