ವಿಧಾನಸೌಧದ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ರವರು ಬಜೆಟ್ ಮಂಡನೆಗೆ ಹಣಕಾಸಿನ ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನ ಐದು ಪಾಲಿಕೆಗಳು ಪ್ರತ್ಯೇಕ ಬಜೆಟ್ ಮಂಡಿಸಲಿದ್ದು, ಉತ್ತಮ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಶಾಸಕರ ಜತೆಗೂ ಚರ್ಚೆ ಮಾಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಮಾಧ್ಯಮದ ಮುಂದೆ ಹೇಳಿದ್ದಾರೆ.
ವಿಕೇಂದ್ರಿಕರಣದಿಂದಾಗಿ ಆಯಾ ಪಾಲಿಕೆಗಳ ಅನುದಾನ ಬೇರೆಡೆಗೆ ವರ್ಗಾವಣೆ ಆಗುವುದಿಲ್ಲ” ಈಗ ಹೇಗೆ ಇದೆಯೋ ಹಾಗೆ ಕೆಲಸ ನಿರ್ವಹಿಸುತ್ತವೆ ಎಂದು ಹೇಳಿದ್ದಾರೆ.