2026-07-23 07:22:13

d news for Metro and BMTC passengers|ಮೆಟ್ರೋ ಹಾಗೂ ಬಿಎಂಟಿಸಿ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌|Speed News Kannada

d news for Metro and BMTC passengers|ಮೆಟ್ರೋ ಹಾಗೂ ಬಿಎಂಟಿಸಿ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌|Speed News Kannada

ಬೆಂಗಳೂರು ನಗರದ ಲಕ್ಷಾಂತರ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. ನಿತ್ಯ ಮೆಟ್ರೋ ಹಾಗೂ ಬಿಎಂಟಿಸಿ ಬಸ್‌ಗಳನ್ನು ಬಳಸುವ ಪ್ರಯಾಣಿಕರ ಅನುಕೂಲಕ್ಕಾಗಿ ಇಲಾಖೆಯು 'ಒಂದೇ ಸ್ಮಾರ್ಟ್ ಕಾರ್ಡ್' ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೆ ತರಲು ಮುಂದಾಗಿದೆ.ಸದ್ಯ ಮೆಟ್ರೋ ಮತ್ತು ಬಸ್ ಪ್ರಯಾಣಕ್ಕೆ ಪ್ರತ್ಯೇಕ ಟಿಕೆಟ್ ಅಥವಾ ಕಾರ್ಡ್‌ಗಳನ್ನು ಬಳಸಬೇಕಾದ ಅನಿವಾರ್ಯತೆ ಇದೆ. ಆದರೆ ಇನ್ಮುಂದೆ, ಒಂದೇ ಸ್ಮಾರ್ಟ್ ಕಾರ್ಡ್ ಮೂಲಕ ಮೆಟ್ರೋ ಮತ್ತು ಬಿಎಂಟಿಸಿ ಎರಡರಲ್ಲೂ ಸುಲಭವಾಗಿ ಪ್ರಯಾಣಿಸಬಹುದು. ಪ್ರಯಾಣಿಕರು ಒಮ್ಮೆ ರೀಚಾರ್ಜ್ ಮಾಡಿಸಿಕೊಂಡರೆ ಸಾಕು, ಮೆಟ್ರೋ ನಿಲ್ದಾಣ ಮತ್ತು ಬಸ್‌ಗಳಲ್ಲಿ ಕಾರ್ಡ್ ಸ್ವೈಪ್ ಮಾಡುವ ಮೂಲಕ ಪ್ರಯಾಣ ಮುಂದುವರಿಸಬಹುದು.

ಈ ಯೋಜನೆಯ ಜಾರಿಗೆ ಬಿಎಂಟಿಸಿ ಈಗಾಗಲೇ ಸಿದ್ಧತೆ ನಡೆಸಿದ್ದು, ತನ್ನ ಎಲ್ಲಾ ಡಿಪೋಗಳಿಗೆ ಅತ್ಯಾಧುನಿಕ ಟಿಕೆಟ್ ಮಿಷನ್‌ಗಳನ್ನು ವಿತರಿಸುತ್ತಿದೆ. ಈ ಹೊಸ ಮಿಷನ್‌ಗಳು ಸ್ಮಾರ್ಟ್ ಕಾರ್ಡ್‌ಗಳನ್ನು ಸುಲಭವಾಗಿ ರೀಡ್ ಮಾಡಬಲ್ಲವು. ಅಲ್ಲದೆ, ಕಾರ್ಡ್ ಪಡೆಯಲು ಮತ್ತು ರೀಚಾರ್ಜ್ ಮಾಡಲು ಅನುಕೂಲವಾಗುವಂತೆ ವಿಶೇಷ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.ಈ ವ್ಯವಸ್ಥೆಯು ಮೆಟ್ರೋ, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿತ್ಯ ಅವಲಂಬಿಸಿರುವ ಲಕ್ಷಾಂತರ ಮಂದಿಗೆ ಸಮಯದ ಉಳಿತಾಯದ ಜೊತೆಗೆ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸಲಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.