2026-05-11 06:45:20

d sudhakar cremeton held at challakere; cm dcm participated| ಪಂಚಭೂತಗಳಲ್ಲಿ ಲೀನವಾದ ಸಚಿವ ಡಿ.ಸುದಾಕರ್; ಕಂಬನಿ ಮಿಡಿದ ಗಣ್ಯರು| Speed News Kannada

d sudhakar cremeton held at challakere; cm dcm participated| ಪಂಚಭೂತಗಳಲ್ಲಿ ಲೀನವಾದ ಸಚಿವ ಡಿ.ಸುದಾಕರ್; ಕಂಬನಿ ಮಿಡಿದ ಗಣ್ಯರು| Speed News Kannada

ಹಿರಿಯೂರು: ಹಿರಿಯೂರು ಶಾಸಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಿಸದೇ ಭಾನುವಾರ ನಿಧನರಾಗಿದ್ದರು. ಇಂದು ಚಳ್ಳಕೆರೆಯ ಜೈನಧಾಮದಲ್ಲಿ ಜೈನ ಮುಕ್ತಿಧಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಿತು.

ಸುಧಾಕರ್‌ ಪುತ್ರ ಸುಹಾಸ್ ಅಂತಿಮ ಕ್ರಿಯೆಗಳನ್ನು ನಡೆಸಿದರು. ಜೈನ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಸಲಾಗಿದ್ದು ಸುಧಾಕರ್ ಅವರ ಪಾರ್ಥಿವ ಶರೀರಕ್ಕೆ ಪುತ್ರ ಸುಹಾಸ್ ಅಗ್ನಿ ಸ್ಪರ್ಶ ಮಾಡಿದರು.

ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯುಟಿ ಖಾದರ್, ಡಿಸಿಎಂ ಡಿಕೆ ಶಿವಕುಮಾರ್ ಸಚಿವರಾದ ಜಿ.ಪರಮೇಶ್ವರ್, ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಚಲುವರಾಯಸ್ವಾಮಿ  ಸೇರಿದಂತೆ ಹಲವು ಶಾಸಕರು ಭಾಗಿಯಾಗಿದ್ದರು. ಸಾವಿರಾರು ಅಭಿಮಾನಿಗಳು ಕಂಬನಿ ಮಿಡಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.