2026-06-08 02:13:15

da hiked; good news to state employees| ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ !: ತುಟ್ಟಿಭತ್ಯೆ ಹೆಚ್ಚಳ | Speed News Kannada

da hiked; good news to state employees| ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ !: ತುಟ್ಟಿಭತ್ಯೆ ಹೆಚ್ಚಳ | Speed News Kannada

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಶೇ 1.50ರಷ್ಟು ಹೆಚ್ಚಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ವೇತನದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ 14.25ರಿಂದ ಶೇ 15.75ಕ್ಕೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2026ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ದರಗಳನ್ನು ಪರಿಷ್ಕರಿಸಲಾಗಿದೆ.

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2026 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 14.25 ರಿಂದ ಶೇಕಡ 15.75 ಕ್ಕೆ ಹೆಚ್ಚಿಸಲಾಗಿದೆ.

 

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.