2026-06-25 02:09:21

Dakshina Kannada: Student knifes minor at private college ದಕ್ಷಿಣ ಕನ್ನಡ; ಕಾಲೇಜಿನಲ್ಲೇ ಸಹಪಾಠಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ Speed News Kannada

Dakshina Kannada: Student knifes minor  at private college ದಕ್ಷಿಣ ಕನ್ನಡ; ಕಾಲೇಜಿನಲ್ಲೇ ಸಹಪಾಠಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ Speed News Kannada

ಮಂಗಳೂರು: 19 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಅಪ್ರಾಪ್ತ ವಯಸ್ಸಿನ ಸಹಪಾಠಿಯನ್ನು ಚಾಕುವಿನಿಂದ ಇರಿದಿರುವ ಘಟನೆ ಇಂದು  ನಡೆದಿದೆ. ದಕ್ಷಿಣ ಕನ್ನಡದ ಖಾಸಗಿ ಕಾಲೇಜಿನಲ್ಲಿ ಇವರಿಬ್ಬರ ನಡುವೆ ಜಗಳ ನಡೆದಿದೆ. ಆಗ ಸಿಟ್ಟಿಗೆದ್ದ 19 ವರ್ಷದ ವಿದ್ಯಾರ್ಥಿ ಮತ್ತೊಬ್ಬ ವಿದ್ಯಾರ್ಥಿಯನ್ನು ತನ್ನ ಬಳಿ ಇದ್ದ ಪೆನ್‌ ಚಾಕುವಿನಿಂದ ಇರಿದಿದ್ದಾನೆ. 
ಚಾಕು ಇರಿದ ವಿದ್ಯಾರ್ಥಿಯನ್ನು ಹೇಮಂತ್‌ ಎಂದು ಗುರುತಿಸಲಾಗಿದೆ. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಈತನ ಸಹಪಾಠಿ. ಇಬ್ಬರ ದೈಹಿಕ ಬಲ ಕುರಿತು ಜಗಳ ಆರಂಭವಾಗಿದೆ. ಆಗ ಹೇಮಂತ್‌ ಚಾಕುವಿನಿಂದ ಬೆನ್ನಿಗೆ ಇರಿದಿದ್ದಾನೆ.
ಕೂಡಲೇ ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರಿಬ್ಬರ ಮಧ್ಯೆ ಪ್ರವೇಶಿಸಿದ ಮತ್ತೊಬ್ಬ ವಿದ್ಯಾರ್ಥಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಹೇಮಂತ್‌ ನನ್ನು ಬಂಧಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.