ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-1 ಆರೋಪಿಯಾಗಿರುವ ನಟ ದರ್ಶನ್ ಆಪ್ತೆ ಪವಿತ್ರಾ ಗೌಡ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಸಿಸಿಎಚ್ ನ್ಯಾಯಾಲಯ ತಿರಸ್ಕರಿಸಿದೆ.
ಪವಿತ್ರಾ ಗೌಡ, ಮಗಳ ಪರೀಕ್ಷೆಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಮಧ್ಯಂತರ ಜಾಮೀನಿಗೆ ಅವಕಾಶ ನೀಡಲು ನಿರಾಕರಿಸಿದೆ.