2026-06-08 05:28:20

davanagere bye election result is behind hijab order:kumaraswamy | ಹಿಜಾಬ್ ಆದೇಶ: ದಾವಣಗೆರೆ ಉಪ ಚುನಾವಣೆ ಫಲಿತಾಂಶ ಕಾರಣ: ಕೇಂದ್ರ ಸಚಿವ ಕುಮಾರಸ್ವಾಮಿ| Speed News Kannada

davanagere bye election result is behind hijab order:kumaraswamy | ಹಿಜಾಬ್ ಆದೇಶ: ದಾವಣಗೆರೆ ಉಪ ಚುನಾವಣೆ ಫಲಿತಾಂಶ ಕಾರಣ: ಕೇಂದ್ರ ಸಚಿವ ಕುಮಾರಸ್ವಾಮಿ| Speed News Kannada

ಬೆಂಗಳೂರು: ದಾವಣಗೆರೆ ಉಪ ಚುನಾವಣೆಯ ಫಲಿತಾಂಶ ಹೊರಬಂದ ನಂತರ ಕಾಂಗ್ರೆಸ್ ಪಕ್ಷಕ್ಕೆ ದಿಢೀರ್ ಜ್ಞಾನೋದಯವಾಗಿ ವಿವಾದಿತ ಹಿಜಾಬ್ ವಿಷಯವನ್ನು ಮತ್ತೆ ಮುನ್ನೆಲೆಗೆ ತಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜಿಪಿ ಭವನದಲ್ಲಿಮಾತನಾಡಿದ ಅವರು, ಹಿಜಾಬ್ ಕುರಿತು ನಾನು ವಿಧಾನಸಭೆಯಲ್ಲಿ  ಹಿಂದೆಯೇ ಚರ್ಚೆ ಮಾಡಿದ್ದೇನೆ. ವಿಸ್ತೃತವಾಗಿ ಮಾತನಾಡಿದ್ದೇನೆ. ನಾನು ಏನು ಹೇಳಿದ್ದೇನೆ ಎಂಬುದು ಎಲ್ಲರಿಗೂ ತಿಳಿದಿದೆ. ಹೊಸದಾಗಿ ಹೇಳುವುದು ಏನೂ ಇಲ್ಲ ಎಂದರು.

ಇತ್ತೀಚಿಗೆ ನಡೆದ ಪರೀಕ್ಷೆಯಲ್ಲಿ ಒಬ್ಬ ಹುಡುಗನ ಮೈ ಮೇಲಿದ್ದ ಜನಿವಾರ ತೆಗೆಸಿದ್ದನ್ನು ಸಮರ್ಥನೆ ಮಾಡಲು ಸಾಧ್ಯವೇ? ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯ ಲಾಭದ ದೃಷ್ಟಿ ಬಿಟ್ಟರೆ ಸಮಾಜದ ಶಾಂತಿ ಮುಖ್ಯವಲ್ಲ. ದಾವಣಗೆರೆ ಉಪ ಚುನಾವಣೆಯಲ್ಲಿ ಒಂದು ಸಮುದಾಯದ ಜನರು ಮತ ಚಲಾವಣೆ ಮಾಡಿರುವ ರೀತಿ ನೋಡಿ ಗಾಬರಿಯಾಗಿ ಹಿಜಾಬ್‌ ಕುರಿತು ಕಾನೂನು ಮಾಡಿದ್ದಾರೆ ಎಂದು ದೂರಿದರು.

ನಾನು ಎಲ್ಲ ಧರ್ಮಗಳನ್ನ ಗೌರವಿಸುತ್ತೇನೆ. ನನ್ನ ಅಭಿಪ್ರಾಯ ಏನು ಎಂಬುದನ್ನು ನೂರಾರು ಬಾರಿ ಅನೇಕ ವೇದಿಕೆಗಳಲ್ಲಿ ಸ್ಪಷ್ಟವಾಗಿ ಹೇಳಿದ್ದೇನೆ. ಅಧಿಕಾರಕ್ಕೆ ಬಂದ ಮೂರು ವರ್ಷದಿಂದ ಹಿಜಾಬ್ ವಿಚಾರದಲ್ಲಿ ಏನು ಮಾಡುತ್ತಿದ್ದರು? 16ನೇ ತಾರೀಖು ಮುಸ್ಲೀಂ ಸಮಾವೇಶ ಇದೆ, ಅದಕ್ಕೆ ಹೆದರಿ ಈ ನಿರ್ಧಾರ ಮಾಡಿದ್ದಾರೆ ಎಂದರು. ಹಿಜಾಬ್‌ ಪ್ರಕರಣ ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆಯಲ್ಲಿದೆ. ಹಿಜಾಬ್ ಬಗ್ಗೆ ತಡೆಯಾಜ್ಜೆ ಜಾರಿಯಲ್ಲಿದೆ. ಅದು ತೆರವಾಗದೇ ಇವರು ಈ ಆದೇಶ ಮಾಡಿದ್ದಾರೆ. ನ್ಯಾಯಾಂಗಕ್ಕೂ ಈ ಸರಕಾರ ಅಪಚಾರ ಮಾಡುತ್ತಿದೆ ಎಂದು ಟೀಕಿಸಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.