ದಾವಣಗೆರೆ: ದಾವಣಗೆರೆ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ದಾಖಲಿಸಿದ್ದಾರೆ.
20ನೇ ಸುತ್ತಿನ ನಂತರ ಅವರು 4967 ಮತಗಳ ಅಂತರದಿಂದ ಮುಂದಿದ್ದರು.
ಮತ ಎಣಿಕೆ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.
ಬಿಜೆಪಿಯ ಸೋಲು ಖಚಿತವಾಗುತ್ತಿದ್ದಂತೆ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಮೋಸ ಮತ್ತು ಹಣಬಲದಿಂದ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದರು.
ಗಮನಾರ್ಹ ಮತಗಳನ್ನು ಗಳಿಸಿದ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಪ್ರತಿಕ್ರಿಯೆ ನೀಡಿದ್ದು, 17 ಸಾವಿರಕ್ಕೂ ಹೆಚ್ಚು ಮತ ನೀಡಿದ ದಾವಣಗೆರೆ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ನಾನು ಈಗ ದಾವಣಗೆರೆಯಲ್ಲಿ ಶಾಶ್ವತವಾಗಿ ನೆಲೆಸುತ್ತೇನೆ ಮತ್ತು ಈ ಭಾಗದ ಜನರ ಜೊತೆ ಸದಾ ಇರುತ್ತೇನೆ ಎಂದು ತಿಳಿಸಿದ್ದಾರೆ.