2026-06-08 01:19:43

davanagere; congress candidate samarth wonದಾವಣಗೆರೆ: ಪ್ರಯಾಸದ ಗೆಲುವು ಕಂಡ ಕಾಂಗ್ರೆಸ್‌ನ ಸಮರ್ಥ್ ಶಾಮನೂರು Speed News Kannada

davanagere; congress candidate samarth wonದಾವಣಗೆರೆ: ಪ್ರಯಾಸದ ಗೆಲುವು ಕಂಡ ಕಾಂಗ್ರೆಸ್‌ನ ಸಮರ್ಥ್ ಶಾಮನೂರು Speed News Kannada

ದಾವಣಗೆರೆ: ದಾವಣಗೆರೆ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಶಾಮನೂರು ಪ್ರಯಾಸದ ಗೆಲುವು ದಾಖಲಿಸಿದ್ದಾರೆ.

20ನೇ ಸುತ್ತಿನ ನಂತರ ಅವರು  4967 ಮತಗಳ ಅಂತರದಿಂದ ಮುಂದಿದ್ದರು.

 

ಮತ ಎಣಿಕೆ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

ಬಿಜೆಪಿಯ ಸೋಲು ಖಚಿತವಾಗುತ್ತಿದ್ದಂತೆ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಮೋಸ ಮತ್ತು ಹಣಬಲದಿಂದ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದರು.

ಗಮನಾರ್ಹ ಮತಗಳನ್ನು ಗಳಿಸಿದ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಪ್ರತಿಕ್ರಿಯೆ ನೀಡಿದ್ದು, 17 ಸಾವಿರಕ್ಕೂ ಹೆಚ್ಚು ಮತ ನೀಡಿದ ದಾವಣಗೆರೆ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ನಾನು ಈಗ ದಾವಣಗೆರೆಯಲ್ಲಿ ಶಾಶ್ವತವಾಗಿ ನೆಲೆಸುತ್ತೇನೆ ಮತ್ತು ಈ ಭಾಗದ ಜನರ ಜೊತೆ ಸದಾ ಇರುತ್ತೇನೆ ಎಂದು ತಿಳಿಸಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.