2026-04-24 12:19:35

davanagere; talk war between zameer mallikarjun Speed News Kannada

davanagere; talk war between zameer mallikarjun  Speed News Kannada

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರೆವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಕುರಿತು ಸಚಿವರಲ್ಲೇ ಜಟಾಪಟಿ ಆರಂಭವಾಗಿದೆ. ಸಚಿವ ಎಸ್.‌ ಎಸ್.‌ ಮಲ್ಲಿಕಾರ್ಜುನ್ ಅವರು ತಮ್ಮ ಪುತ್ರನಿಗೆ ಟಿಕೆಟ್‌ ಕೊಡಿಸಲು ಪ್ರಯತ್ನ ನಡೆಸುತ್ತಿದ್ದರೆ ಮತ್ತೊಬ್ಬ ಸಚಿವ ಜಮೀರ್ ಅಹ್ಮದ್​ ಖಾನ್ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್‌ ಕೊಡಲಿಸಲು ಲಾಬಿ ನಡೆಸುತ್ತಿದ್ದಾರೆ.

ಜಮೀರ್ ಅಹ್ಮದ್ ಖಾನ್ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು  ಒತ್ತಾಯಿಸಿದ್ದಾರೆ. ಇತ್ತೀಚೆಗೆ ವಿಧಾನಪರಿಷತ್‌ ಸದಸ್ಯ ಅಬ್ದುಲ್ ಜಬ್ಬಾರ್ ನಿವಾಸಕ್ಕೆ ಭೇಟಿ ನೀಡಿದ್ದ ಅಲ್ಪಸಂಖ್ಯಾತ ಅವರು, ಸಮುದಾಯಕ್ಕೆ ಟಿಕೆಟ್ ಕೊಡಿಸಲು ವರಿಷ್ಠರ ಮೇಲೆ ಒತ್ತಡ ಹೇರುವುದಾಗಿ ಭರವಸೆ ನೀಡಿದ್ದರು ಎಂದು ತಿಳಿದು ಬಂದಿದೆ.

ಜಮೀರ್ ವರ್ತನೆಗೆ ಮಲ್ಲಿಕಾರ್ಜುನ್‌ ಆಕ್ರೋಶ ಹೊರಹಾಕಿದ್ದಾರೆ. 'ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ಇವು ನಮ್ಮ ಕ್ಷೇತ್ರಗಳು''ಅವನ್ಯಾರು ಮಾತನಾಡೋಕೆ? ಇವೆಲ್ಲಾ ಸರಿ ಇರಲ್ಲ'ಸಮಯ ಬಂದಾಗ ನಾನು ಮಾತನಾಡ್ತೀನಿʼ ಎಂದು ಮಲ್ಲಿಕಾರ್ಜುನ ಖಡಕ್​ ಆಗಿ ಪ್ರತಿಕ್ರಿಯಿಸಿದ್ದಾರೆ.

ತಮ್ಮ ಪುತ್ರ ಸಮರ್ಥ್‌ ಗೆ ಟಿಕೆಟ್ ನೀಡಲು ಕೆಲವು ನಾಯಕರು ಆಗ್ರಹಿಸುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ. ಸಭೆ ಕರೆದಾಗ ಚರ್ಚೆ ನಡೆಸೋಣ. ಅಲ್ಪಸಂಖ್ಯಾತ ಸಮುದಾಯದ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುತ್ತೆ ನೋಡೋಣ. ಹೈಕಮಾಂಡ್ ಹೇಳೀದ ಹಾಗೆ ಕೇಳೋಣ ಎಂದಿದ್ದಾರೆ.

ನಮ್ಮಲ್ಲಿ ಒಮ್ಮತ ಇದೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ನಿರ್ಧಾರ ಮಾಡುತ್ತೇವೆ. ಎಲ್ಲವನ್ನೂ  ಕಾರ್ಯಕರ್ತರಿಗೆ ಬಿಡುತ್ತೇನೆ. ನಾನು ಮಧ್ಯಪ್ರವೇಶಿಸಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.