2026-06-08 01:26:05

Davangere South by election Jameer campaign entry| ದಾವಣಗೆರೆ ದಕ್ಷಿಣ ಉಪಚುನಾವಣೆ ಜಮೀರ್ ಪ್ರಚಾರಕ್ಕೆ ಎಂಟ್ರಿ|Speed News Kannada

Davangere South by election Jameer campaign entry| ದಾವಣಗೆರೆ ದಕ್ಷಿಣ ಉಪಚುನಾವಣೆ ಜಮೀರ್  ಪ್ರಚಾರಕ್ಕೆ ಎಂಟ್ರಿ|Speed News Kannada

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಣರಂಗ ಕಾವೇರಿದ್ದು, ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಅಧಿಕೃತವಾಗಿ ಪ್ರಚಾರಕ್ಕೆ ಎಂಟ್ರಿ ನೀಡಿದ್ದಾರೆ.ಹುಬ್ಬಳ್ಳಿಯಲ್ಲಿ ನೀಡಿದ ವಿಶೇಷ ಸಂದರ್ಶನದಲ್ಲಿ ಜಮೀರ್ ಅಹ್ಮದ್ ಖಾನ್, ತಮ್ಮ ಮೇಲೆ ಬಂದಿದ್ದ ಟಿಕೆಟ್ ಗೊಂದಲ ಹಾಗೂ ಪ್ರಚಾರದಿಂದ ದೂರ ಉಳಿದಿದ್ದ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ದಾವಣಗೆರೆ ದಕ್ಷಿಣ ಟಿಕೆಟ್‌ಗಾಗಿ ತಾವು ಯಾವುದೇ ಲಾಬಿ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.

2023ರ ಚುನಾವಣೆಯ ವೇಳೆ ಶಾಮನೂರು ಶಿವಶಂಕರಪ್ಪ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವ ಭರವಸೆ ನೀಡಿದ್ದರು ಎಂದು ತಿಳಿಸಿದ್ದಾರೆ.ಆದರೆ, ಕಾಂಗ್ರೆಸ್ ಹೈಕಮಾಂಡ್ ಕುಟುಂಬ ಪರಂಪರೆಯ ಆಧಾರದ ಮೇಲೆ ಸಮರ್ಥ್‌ ಶಾಮನೂರು  ಅವರಿಗೆ ಟಿಕೆಟ್ ನೀಡಿದೆ ಎಂದು ಜಮೀರ್ ಹೇಳಿದರು.ಕಾಂಗ್ರೆಸ್ ಪಕ್ಷ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿದ್ದು, ಅದರಂತೆ ತಾವು ಕೆಲಸ ಮಾಡುತ್ತೇವೆ ಎಂದು ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.