2026-06-08 06:47:25

DCM Ajit Pawar Dies in a Plane Crash." | ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವು | Speed News Kannada

DCM Ajit Pawar Dies in a Plane Crash.

ಮುಂಬೈ, ಜನವರಿ 28: ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ  ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 6 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಜಿಲ್ಲಾ ಪರಿಷತ್ ಚುನಾವಣೆಗೆ ಪ್ರಚಾರ ಸಭೆಗಳನ್ನು ಬಾರಾಮತಿಯಲ್ಲಿ ಆಯೋಜಿಸಲಾಗಿತ್ತು. ಅಜಿತ್ ಪವಾರ್ ಇಂದು ಬೆಳಿಗ್ಗೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ಬಾರಾಮತಿಗೆ ತೆರಳುತ್ತಿದ್ದರು ಎನ್ನಲಾಗಿದೆ. 

ಅಜಿತ್‌ ಪವಾರ್‌ ಸೇರಿದಂತೆ 6 ಸಿಬ್ಬಂದಿಗಳನ್ನು ವಿಮಾನ ಹೊತ್ತೊಯ್ಯುತ್ತಿತ್ತುಎಂದು ತಿಳಿಸಲಾಗಿದೆ. ಮುಂಬೈನಿಂದ ಬಾರಾಮತಿಗೆ ವಿಮಾನ ತೆರಳುತ್ತಿದ್ದ. ಏರ್‌ಕ್ರಾಫ್ಟ್‌ ಲ್ಯಾಂಡಿಂಗ್‌ ಆಗುವ ವೇಳೆ ಬಾರಾಮತಿಯ ಹೊಲದಲ್ಲಿ ಅಪಘಾತ ಸಂಭವಿಸಿದೆ ಎಂದು ಡಿಜಿಸಿಎ ತಿಳಿಸಿದೆ.
ಬಾರಾಮತಿಯಲ್ಲಿ ಬೆಳಗ್ಗೆ 8.30ಕ್ಕೆ ವಿಮಾನ ಲ್ಯಾಂಡಿಂಗ್‌ ವೇಳೆ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಮಾಹಿತಿ ನೀಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.