ಬೆಂಗಳೂರು: ನಾನು ಒಡಿಶಾ ಶಾಸಕರನ್ನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ. ಅಧಿವೇಶನ ಕಲಾಪ ಮುಗಿದ ಬಳಿಕ ನಾನು ಹೋಗಿ ಅವರನ್ನು ಭೇಟಿ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾಅತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ ಎಂದರು. ಅವರು ಯಾವ ಕಾರಣಕ್ಕೆ ಬಂದಿದ್ದಾರೆ ಎಂದು ಗೊತ್ತಿಲ್ಲ. ಆ ರಾಜ್ಯದ ನಮ್ಮ ಪಿಸಿಸಿ ಅಧ್ಯಕ್ಷರು ಕರೆ ಮಾಡಿ ನಮ್ಮ ಶಾಸಕರು ಬರುತ್ತಿದ್ದಾರೆ ಎಂದು ಕೇಳಿದರು. ಪಕ್ಷದ ವಿಚಾರ ಇರಬೇಕು, ನಾನೇ ಹೋಗಿ ಭೇಟಿ ಮಾಡುವೆ ಎಂದು ಹೇಳಿದ್ದೇನೆ. ಅವರಿಗೆ ಮೈಸೂರು ನೋಡುವ ಆಸೆ ಇದೆ. ಅವರು ನಾವು ಬರುತ್ತೇವೆ ಎಂದು ತಿಳಿಸಿದಾಗ, ನಾನು ಬನ್ನಿ ಎಂದು ಹೇಳಿದೆ. ಆರಾಮಾಗಿ ಇರುವ ಜಾಗ ಬೇಕು ಎಂದು ಕೇಳಿದರು. ಹೀಗಾಗಿ ಅವರಿಗೆ ವ್ಯವಸ್ಥೆ ಮಾಡಿದ್ದೇವೆ ಎಂದು ಹೇಳಿದರು.
ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡಮತದಾನವಾಗದಂತೆ ತಡೆಯಲು ಪಕ್ಷ ಟಾಸ್ಕ್ ನಿಡಿದೆಯೇ ಎಂಬ ವಿಚಾರವಾಗಿ, ಪಕ್ಷ ಹೇಳಿದ್ದನ್ನು ಮಾಡಬೇಕು. ಎಲ್ಲಾ ರಾಜ್ಯಗಳಲ್ಲೂ ಈ ರೀತಿ ನಡೆಯುತ್ತಿರುತ್ತದೆ. ಇದು ಹೊಸತೇನಲ್ಲ. ನನ್ನ ಭೇಟಿಗೆ ಸಮಯ ಕೇಳಿದರು. ನಾನು ಅಧಿವೇಶನ ನಡೆಯುತತಿದೆ. ಇಲ್ಲಿಗೆ ಬರಬೇಡಿ ಕಲಾಪ ಮುಗಿಸಿಕೊಂಡು ನಾನೇ ಬರುತ್ತೇನೆ ಎಂದು ಹೇಳಿರುವೆ. ಎಂದು ಹೇಳಿದೆ.
ನನಗೆ ಆಪರೇಷನ್ ಕಮಲದ ಬಗ್ಗೆ ಗೊತ್ತಿಲ್ಲ. ಬೆಂಗಳೂರು ಸುರಕ್ಷಿತ ಹೀಗಾಗಿ ಅವರು ಇಲ್ಲಿಗೆ ಬಂದು ವೀಕ್ಷಣೆ ಮಾಡಬೇಕು ಎಂದು ಹೇಳಿದರು, ನಾನು ಅವರನ್ನು ಭೇಟಿಯಾಗಿಲ್ಲ. ಅವರು ನಮ್ಮ ಸಹೋದ್ಯೋಗಿಗಳು, ಅವರು ಬರುತ್ತಾರೆ ಎಂದಾಗ ಹಾಗೂ ಪಿಸಿಸಿ ಅಧ್ಯಕ್ಷರು ನನಗೆ ಈ ವಿಚಾರವಾಗಿ ಕೇಳಿದಾಗ. ನಾನು ಬನ್ನಿ ಎಂದು ಹೇಳಿರುವೆ. ಅವರನ್ನು ನೋಡಿಕೊಳ್ಳುವುದು ನಮ್ಮ ಕರ್ತವ್ಯ. ನಾನು ಇದನ್ನು ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದ ಸಮಯದಿಂದಲೂ ಮಾಡಿಕೊಂಡು ಬರುತ್ತಿರುವೆ. ಅಹ್ಮದ್ ಪಟೇಲ್ ಅವರ ರಾಜ್ಯಸಭೆ ಚುನಾವಣೆ, ಮಧ್ಯಪ್ರದೇಶ ಸೇರಿದಂತೆ ಅನೇಕ ಬಾರಿ ಈ ಕೆಲಸ ಮಾಡಿದ್ದೇನೆ ಎಂದರು.