ಬೆಂಗಳೂರು:ಮುಖ್ಯಮಂತ್ರಿ ಆಗಲೇ ಬೇಕೆಂದು ಹಠ ತೊಟ್ಟಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಮತ್ತೆ ದೇವರ ಮೊರೆ ಹೋಗಿದ್ದಾರೆ. ಅವರು ಕುಟುಂಬ ಸಹಿತ ತಿರುಪತಿಗೆ ತೆರಳಿದ್ದು, ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಎಕ್ಸ್ ನಲ್ಲಿ ಫೋಟೋ ಹಂಚಿಕೊಂಡಿರುವ ಅವರು, ರಾಜ್ಯ ಮತ್ತು ಎಲ್ಲರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾಗಿ ಹೇಳಿದ್ದಾರೆ.
ನಿನ್ನೆಯಷ್ಟೇ ಅವರು ತಿರುವನಂತಪುರದಲ್ಲಿ ಕೇರಳಂ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದರಾದರೂ ಮಾತುಕತೆಯ ವಿವರ ಬಹಿರಂಗಗೊಂಡಿಲ್ಲ.