2026-06-08 06:45:24

DCM is very happy with CMs budget |‌ ಸಿಎಂ ಬಜೆಟ್‌ ಗೆ ಡಿಸಿಎಂ ಫುಲ್‌ ಖುಷ್ | Speed News Kannada

DCM is very happy with CMs budget |‌ ಸಿಎಂ ಬಜೆಟ್‌ ಗೆ ಡಿಸಿಎಂ ಫುಲ್‌ ಖುಷ್ | Speed News Kannada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮೆಚ್ಚುಗೆ ಸೂಚಿಸಿದ್ದಾರೆ. 
ಬೆಂಗಳೂರು ಅಭಿವೃದ್ಧಿ ಮತ್ತು ಜಲಸಂಪನ್ಮೂಲ ಖಾತೆ ಹೊಂದಿರುವ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ಬಜೆಟ್‌ ವಿವರಗಳನ್ನು ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದ್ದಾರೆ. 
ನೀರಾವರಿ ಯೋಜನೆಗಳಿಗೆ ಬಜೆಟ್'ನಲ್ಲಿ ಭರ್ಜರಿ ಅನುದಾನ ಒದಗಿಸಲಾಗಿದೆ. ಕರ್ನಾಟಕದ ಜಲಸಂಪನ್ಮೂಲವನ್ನು ಸಂರಕ್ಷಿಸಿ, ಪ್ರತಿಯೊಬ್ಬ ರೈತನ ಜಮೀನಿಗೂ ನೀರು ತಲುಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. 2026-27ರ ಬಜೆಟ್'ನಲ್ಲಿ ನೀರಾವರಿ ಯೋಜನೆಗಳಿಗೆ ವಿಶೇಷ ಒತ್ತು ನೀಡಲಾಗಿದ್ದು, ಮೇಕೆದಾಟು, ಭದ್ರಾ ಮೇಲ್ದಂಡೆ ಮತ್ತು ಕೃಷ್ಣಾ ಮೇಲ್ದಂಡೆಯಂತಹ ಬೃಹತ್ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. 
ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಭರ್ಜರಿ ಅನುದಾನ!
ನಮ್ಮ ಸಿಲಿಕಾನ್‌ ಸಿಟಿ ಬೆಂಗಳೂರಿನ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸಲು 2026-27ರ ಬಜೆಟ್‌ನಲ್ಲಿ ನಮ್ಮ ಸರ್ಕಾರವು ಮಹತ್ವದ ಯೋಜನೆಗಳನ್ನು ಹಮ್ಮಿಕೊಂಡಿದೆ. ರಸ್ತೆಗಳ ಸುಧಾರಣೆ, ಮೆಟ್ರೋ ವಿಸ್ತರಣೆ ಮತ್ತು ನಾಗರಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದೆ. ಅಭಿವೃದ್ಧಿಯ ಮಂತ್ರ, ಸಮೃದ್ಧಿಯ ಗುರಿ!
ಪ್ರತಿಯೊಂದು ವಲಯಕ್ಕೂ ಸಮಾನ ಆದ್ಯತೆ ನೀಡಿ, ಸಮೃದ್ಧ ಕರ್ನಾಟಕದ ನಿರ್ಮಾಣಕ್ಕಾಗಿ ₹4.48 ಲಕ್ಷ ಕೋಟಿ ಮೊತ್ತದ 2026-2027 ಸಾಲಿನ ಬೃಹತ್ ಬಜೆಟ್ ಮಂಡಿಸಲಾಗಿದೆ. ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಮೂಲಭೂತ ಸೌಕರ್ಯಗಳಿಗೆ ವಿಶೇಷ ಒತ್ತು ನೀಡುವ ಜೊತೆಗೆ, ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕನ್ನಡಿಗನ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಲಿ ಎಂಬ ಆಶಯ ನಮ್ಮದು ಎಂದು ಹೇಳಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.