ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಾಳೆ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಳಗ್ಗೆ 9.50ರ ವಿಮಾನದಲ್ಲಿ ಶಿವಕುಮಾರ್ ತೆರಳುತ್ತಿದ್ದಾರೆ. ಅಸ್ಸಾಂ ವಿಧಾನಸಭಾ ಚುನಾವಣೆ ಸಂಬಂಧ ಪ್ರಿಯಾಂಕ್ ಗಾಂಧಿ ಅವರು ಪ್ರಮುಖ ಮುಖಂಡರ ಸಭೆ ಕರೆದಿದ್ದು, ಈ ಸಭೆಯಲ್ಲಿ ಶಿವಕುಮಾರ್ ಭಾಗವಹಿಸಲಿದ್ದಾರೆ.
ಹಾಗೆಯೇ ಅವರು ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡುವ ಸಾಧ್ಯತೆಗಳಿವೆ. ಅಧಿಕಾರ ಹಸ್ತಾಂತರ ಕುರಿತು ಒತ್ತಡ ಹೇರಲಿದ್ದು, ಅವಕಾಶ ನೀಡುವಂತೆ ಮತ್ತೊಮ್ಮೆ ಕೋರಲಿದ್ದಾರೆ.
ಈ ಹಿಂದೆ ಅವರು ದೆಹಲಿಗೆ ಭೇಟಿ ನೀಡಿದಾಗ ವರಿಷ್ಠರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಸಂಸತ್ ಆಧಿವೇಶನ ನಡೆಯುತ್ತಿದ್ದು, ವರಿಷ್ಠರು ಬೇಟಿಗೆ ಅವಕಾಶ ನೀಡಲಿದ್ದಾರೆಯೇ ಎನ್ನುವ ಮಾಹಿತಿ ಲಭ್ಯವಾಗಿಲ್ಲ.
ಈ ಸಂಬಂಧ ಪ್ರತಿಕ್ರಿಯಿಸಿರುವ ಶಿವಕುಮಾರ್ ಅವರು, ಹೈಕಮಾಂಡ್ ನವರು ಕರೆದಿದ್ದಾರೆ. ಪಕ್ಷದ ನಾಯಕರನ್ನ ಭೇಟಿ ಮಾಡುವುದು ನಮ್ಮ ಕರ್ತವ್ಯ. ದೆಹಲಿಗೆ ತೆರಳಲು ನಾನು ಸಿಎಂ ಅವರ ಅನುಮತಿ ತೆಗೆದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.