2026-06-08 01:24:28

DCM Shivakumar Meets Sonia And Rahul | ಸೋನಿಯಾ ರಾಹುಲ್‌ ಭೇಟಿಯಾದ ಡಿಸಿಎಂ ಶಿವಕುಮಾರ್ ಆಧಿಕಾರ ಹಸ್ತಾಂತರಕ್ಕೆ ಒತ್ತಡ | Speed News Kannada

DCM Shivakumar Meets Sonia And Rahul | ಸೋನಿಯಾ ರಾಹುಲ್‌ ಭೇಟಿಯಾದ ಡಿಸಿಎಂ ಶಿವಕುಮಾರ್ ಆಧಿಕಾರ ಹಸ್ತಾಂತರಕ್ಕೆ ಒತ್ತಡ | Speed News Kannada

ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಪಡೆಯಲೇಬೇಕೆಂಬ ಹಟಕ್ಕೆ ಬಿದ್ದಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ಅವರು ಜನಪಥ್‌ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿದ್ದಾರೆ. ಸುಮಾರು 30 ನಿಮಿಷಗಳ ಕಾಲ ಚರ್ಚೆ ನಡೆದಿದ್ದು ಮಾತುಕತೆಯ ವಿವರಗಳು ಲಭ್ಯವಾಗಿಲ್ಲ. 
ಕಳೆದ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,  ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಹಿಂದೆ ಆಗಿರುವ ಒಪ್ಪಂದದಂತೆ ಅಧಿಕಾರ ಹಸ್ತಾಂತರಕ್ಕೆ ಮನವಿ ಮಾಡಿಕೊಂಡಿದ್ದಾರೆ. 
ಈ ಮಧ್ಯೆ ಶಿವಕುಮಾರ್‌ ಅವರ ಬೆಂಬಲಿಗ ಸಚಿವರು ಮತ್ತು ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ. ಸಚಿವರಾದ ಎನ್.ಚಲುವರಾಯಸ್ವಾಮಿ, ಹೆಚ್.ವಿ.ವೆಂಕಟೇಶ್ ಮತ್ತು ಶಾಸಕ ಕೆ.ಎಂ.ಶಿವಲಿಂಗೇಗೌಡ, ದೆಹಲಿಯಲ್ಲಿದ್ದಾರೆ. 
ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ಈ ಬಾರಿ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ  ಸಿಗುವ ವಿಶ್ವಾಸ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಡಿಕೆಶಿ ಅವರಿಗೂ ಅವಕಾಶ ಕೊಡಬೇಕು. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.