2026-03-07 06:07:09

DCM Shivakumar | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಸಭೆ ಭೂಮಿ ನೀಡಿದವರಿಗೆ ಪರಿಹಾರದ ಚೆಕ್‌ ನೀಡಿದ ಡಿಸಿಎಂ ಶಿವಕುಮಾರ್ | Speed News Kannada

DCM Shivakumar | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಸಭೆ ಭೂಮಿ ನೀಡಿದವರಿಗೆ ಪರಿಹಾರದ ಚೆಕ್‌ ನೀಡಿದ ಡಿಸಿಎಂ  ಶಿವಕುಮಾರ್ | Speed News Kannada

ಬೆಂಗಳೂರು: ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌(PRR-1)ನ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಮತ್ತು ಬಿಬಿಸಿ ಅಧ್ಯಕ್ಷ ಎಲ್.ಕೆ. ಅತೀಕ್, ಬಿಡಿಎ ಆಯುಕ್ತ ಮೇಜರ್ ಪಿ. ಮಣಿಮಣ್ಣನ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. 
ಈ ಸಂದರ್ಭದಲ್ಲಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯ ಪ್ರಗತಿಯನ್ನೂ ಪರಿಶೀಲಿಸಿ, ಭೂಮಿ ನೀಡಿದ ಭೂಮಾಲೀಕರಿಗೆ ಪರಿಹಾರದ ಚೆಕ್‌ಗಳನ್ನು ವಿತರಿಸಲಾಯಿತು. ಈ ಯೋಜನೆಯು ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಿ, ನಗರದ ಹೊರವಲಯಗಳಲ್ಲಿ ಆರ್ಥಿಕತೆಗೆ ಹೊಸ ಚೈತನ್ಯವನ್ನು ನೀಡಲಿದೆ.
ನಾಗರೀಕರಿಗೆ ಸಮಯೋಚಿತ ಸೇವೆ ಒದಗಿಸುವುದು ಮತ್ತು ಆಡಳಿತದಲ್ಲಿ ಹೆಚ್ಚಿನ ಪಾರ್ದರಶಕತೆ ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ಹ್ಯಾರಿಸ್‌ ತಿಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.