ಬೆಂಗಳೂರು: ಬೆಂಗಳೂರು ಬ್ಯುಸಿನೆಸ್ ಕಾರಿಡಾರ್(PRR-1)ನ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಮತ್ತು ಬಿಬಿಸಿ ಅಧ್ಯಕ್ಷ ಎಲ್.ಕೆ. ಅತೀಕ್, ಬಿಡಿಎ ಆಯುಕ್ತ ಮೇಜರ್ ಪಿ. ಮಣಿಮಣ್ಣನ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯ ಪ್ರಗತಿಯನ್ನೂ ಪರಿಶೀಲಿಸಿ, ಭೂಮಿ ನೀಡಿದ ಭೂಮಾಲೀಕರಿಗೆ ಪರಿಹಾರದ ಚೆಕ್‌ಗಳನ್ನು ವಿತರಿಸಲಾಯಿತು. ಈ ಯೋಜನೆಯು ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಿ, ನಗರದ ಹೊರವಲಯಗಳಲ್ಲಿ ಆರ್ಥಿಕತೆಗೆ ಹೊಸ ಚೈತನ್ಯವನ್ನು ನೀಡಲಿದೆ.
ನಾಗರೀಕರಿಗೆ ಸಮಯೋಚಿತ ಸೇವೆ ಒದಗಿಸುವುದು ಮತ್ತು ಆಡಳಿತದಲ್ಲಿ ಹೆಚ್ಚಿನ ಪಾರ್ದರಶಕತೆ ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ಹ್ಯಾರಿಸ್ ತಿಳಿಸಿದ್ದಾರೆ.