2026-06-08 01:25:44

DCM Shivakumar visits Sri Kadusiddheshwara Sansthan | ನೊಣವಿನಕೆರೆ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಭೇಟಿ ನೀಡಿದ ಡಿಸಿಎಂ ಶಿವಕುಮಾರ್‌ | Speed News Kannada

DCM Shivakumar visits Sri Kadusiddheshwara Sansthan | ನೊಣವಿನಕೆರೆ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಭೇಟಿ ನೀಡಿದ ಡಿಸಿಎಂ ಶಿವಕುಮಾರ್‌ | Speed News Kannada

ನೊಣವಿನಕೆರೆ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಇಂದು ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಭೇಟಿ ನೀಡಿದ್ದರು.
ಅವರು, ವೀರ ಗಂಗಾಧರ ಅಜ್ಜಯ್ಯನ ಗದ್ದುಗೆಗೆ ನಮಸ್ಕರಿಸಿ, ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದವನ್ನು ಪಡೆದೆ. ಬಳಿಕ ಅಜ್ಜಯ್ಯನ ಜಾತ್ರಾ ಮಹೋತ್ಸವ - 2026ರ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. 
ಅವರು ಮಾತನಾಡುತ್ತಾ, ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬುದು ವೀರ ಗಂಗಾಧರ ಅಜ್ಜಯ್ಯನ ವಾಣಿಯಾಗಿದೆ. ಅಜ್ಜಯ್ಯನ ಮಾರ್ಗದರ್ಶನದಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಈ ಪವಿತ್ರವಾದ ನಮ್ಮ ಅಜ್ಜಯ್ಯನ ಜಾತ್ರೆಯ ಧರ್ಮಸಭೆಯಲ್ಲಿ ಪಾಲ್ಗೊಂಡಿರುವುದು ನಮ್ಮೆಲ್ಲರ ಭಾಗ್ಯ. 233ನೇ ವರ್ಷದ ವಾರ್ಷಿಕೋತ್ಸವ ಹಾಗೂ 18ನೇ ವರ್ಷದ ಪುಣ್ಯ ಆರಾಧನೆ ನಡೆಯುತ್ತಿದ್ದು, ಈ ವೇಳೆ ಗಂಗಾಧರ ಅಜ್ಜಯ್ಯನ ಪಾದಗಳಿಗೆ ನನ್ನ ಕೋಟಿ ನಮಸ್ಕಾರಗಳು ಎಂದರು. 
ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ ಎಂಬ ಮಾತಿದೆ. ನಾನು ಡಿಸಿಎಂ ಆಗಿ ಅಲ್ಲ, ಈ ಮಠದ ಒಬ್ಬ ಭಕ್ತನಾಗಿ, ಶ್ರೀಗಳ ಶಿಷ್ಯನಾಗಿ, ಅಜ್ಜನ ಒಬ್ಬ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ.
ನನಗೂ ಅಜ್ಜಯ್ಯನಿಗೂ ಇರುವ ಸಂಬಂಧ ಹಾಗೂ ನಂಬಿಕೆ ಎಲ್ಲರಿಗೂ ಗೊತ್ತಿದೆ. ಅವರ ಮಾರ್ಗದರ್ಶನ ಹಾಗೂ ಶಕ್ತಿಯಿಂದಲೇ ಇಲ್ಲಿಯವರೆಗೂ ಬೆಳೆದುಕೊಂಡು ಬಂದಿದ್ದೇವೆ. ಈ ಮಠವನ್ನು ಇನ್ನೂ ಎತ್ತರಕ್ಕೆ ಬೆಳೆಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.