2026-06-08 01:20:07

Delhi fire tragedy 9 dead, many rescued|ದೆಹಲಿ ಬೆಂಕಿ ದುರಂತ 9 ಸಾವು, ಹಲವರು ರಕ್ಷಣೆ| Speed News Kannada

Delhi fire tragedy 9 dead, many rescued|ದೆಹಲಿ ಬೆಂಕಿ ದುರಂತ 9 ಸಾವು, ಹಲವರು ರಕ್ಷಣೆ| Speed News Kannada

ರಾಜಧಾನಿ ದೆಹಲಿಯ ವಿವೇಕ್‌ ವಿಹಾರ್‌ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಮುಂಜಾನೆ ಭೀಕರ ಬೆಂಕಿ ಅವಘಡ ಸಂಭವಿಸಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.ಬೆಳಗಿನ 4 ಗಂಟೆ ಸುಮಾರಿಗೆ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಮೇಲಿನ ಮಹಡಿಗಳಿಗೆ ವ್ಯಾಪಿಸಿದ್ದು, 14 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು.

ಹಲವರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ಗುರು ತೆಗ್‌ ಬಹುದುರ್‌ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಆದರೆ ಎಸಿ ಸ್ಫೋಟದಿಂದ ಅವಘಡ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.