2026-06-25 04:10:58

delhi horror; woman alleges gangrape inside bus;2 arrested| ದೆಹಲಿ: ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ| Speed News Kannada

delhi horror; woman alleges gangrape inside bus;2 arrested| ದೆಹಲಿ: ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ| Speed News Kannada

ನವದೆಹಲಿ: ಸ್ಲೀಪರ್‌ ಬಸ್ಸಿನೊಳಗೆ ಮಹಿಳೆಯೊಬ್ಬರ ಮೇಲೆ ಚಾಲಕ ಮತ್ತು ಕಂಡಕ್ಟರ್‌ ಅತ್ಯಾಚಾರ ಮಾಡಿರುವ ಘಟನೆ ದೆಹಲಿಯಲ್ಲಿ ವರದಿಯಾಗಿದೆ. ಮೇ 12 ರಂದು ಈ ದುರಂತ ಘಟನೆ ನಡೆದಿದೆ. ಈಗಾಗಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆಯ ಹೇಳಿಕೆಯ ಆಧಾರದ ಮೇಲೆ ದೆಹಲಿಯ ರಾಣಿ ಬಾಗ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64(1) (ಅತ್ಯಾಚಾರ), 70(1) (ಸಾಮೂಹಿಕ ಅತ್ಯಾಚಾರ) ಮತ್ತು 3(5) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯು, ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ವೇಳೆ ಸರಸ್ವತಿ ವಿಹಾರ್‌ನ ಬಿ-ಬ್ಲಾಕ್ ಬಸ್ ನಿಲ್ದಾಣದ ಹತ್ತಿರ ಬಸ್‌ ಬಳಿ ನಿಂತಿದ್ದ ಆರೋಪಿಗಳಲ್ಲಿ ಒಬ್ಬನನ್ನು ಸಮಯ ಕೇಳಿದ್ದಾರೆ. ಆಗ ಆರೋಪಿಯು ಆಕೆಯನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

ತಡರಾತ್ರಿ 2 ಗಂಟೆಯ ಸುಮಾರಿಗೆ ಮಹಿಳೆಯನ್ನು ಬಸ್ಸಿನಿಂದ ಹೊರದಬ್ಬಿದ್ದಾರೆ. ಇದರಿಂದ ಮಹಿಳೆಗೆ ಗಾಯಗಳಾಗಿವೆ. ಪೊಲೀಸರು ಬಸ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಸ್‌ ರಾಯಲ್‌ ಕಾರ್ಗೋ ಕಂಪನಿಗೆ ಸೇರಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.