2026-03-07 05:06:30

Demand to gain the trust of all communities for internal reservation | ನೇಮಕಾತಿ ಒಳಮೀಸಲಾತಿಗಾಗಿ ಎಲ್ಲ ಸಮುದಾಯಗಳ ವಿಶ್ವಾಸ ಪಡೆಲು ಆಗ್ರಹ | Speed News Kannada

Demand to gain the trust of all communities for internal reservation | ನೇಮಕಾತಿ ಒಳಮೀಸಲಾತಿಗಾಗಿ ಎಲ್ಲ ಸಮುದಾಯಗಳ ವಿಶ್ವಾಸ ಪಡೆಲು ಆಗ್ರಹ | Speed News Kannada

ಬೆಂಗಳೂರು:ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ನೇಮಕ ಮಾಡುವ ಸಂದರ್ಭದಲ್ಲಿ ಒಳ ಮೀಸಲಾತಿ ಪರಿಗಣನೆಗೆ ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 
ಮಾಧ್ಯಮಗಳೊಂದಿಗ ಮಾತನಾಡಿದ ಅವರು, ರಾಜ್ಯಪಾಲರು ಒಳ ಮೀಸಲಾತಿಗೆ ಅಂಕಿತ ಹಾಕಿ ಆದೇಶ ಮಾಡಿರುವ ಬಗ್ಗೆ ನನಗೆ ಗೊತ್ತಿಲ್ಲ. ರಾಜ್ಯ ಸರ್ಕಾರ ಭರ್ತಿ ಮಾಡಬೇಕಿರುವ ನೇಮಕಾತಿಗೆ ಯಾವ ರೀತಿ ಮಾಡಬೇಕು ಎನ್ನುವ ಬಗ್ಗೆ ಸ್ಪಷ್ಟನೆ ಬೇಕಿದೆ. ಮನಸ್ಸು ಮಾಡಿದರೆ ಸಾಧ್ಯತೆ ಇದೆ. ಆದರೆ, ಅವರು ಗೊಂದಲಕ್ಕೆ ಸಿಲುಕಿದ್ದಾರೆ. ನೇಮಕಾತಿಯ ಮೊದಲು ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಆಗಬೇಕು ಎಂದು ಹೇಳಿದರು. 
ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ಕಾನೂನು ಮಾಡಿದ್ದಾರೆ. ಹಾಗಾಗಿ ಎಲ್ಲ ಸಮುದಾಯದವರೂ ಒಳ ಮೀಸಲಾತಿ ಕೊಡಿ ಅಂತ ಹೇಳಿದ್ದಾರೆ. ಸಮಸ್ಯೆ ಸರಳೀಕರಣ‌ ಮಾಡಬೇಕು. ಕಾನೂನು ತಜ್ಞರ ಸಲಹೆ ಪಡೆದು ಮಾಡಬೇಕು.
ಸಂವಿಧಾನದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕು ಅಂತ ಅಂಬೇಡ್ಕರ್ ಹೇಳಿದ್ದಾರೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ಮುಂದೆ ಸಮುದಾಯಗಳು ಹೋಗಿವೆ. ಅದನ್ನ ನೋಡಿ ಕ್ರಮ ಆಗಬೇಕು ಎಂದು ಹೇಳಿದರು. 
ಗುಪ್ತಚರ ಇಲಾಖೆ ದುರ್ಬಳಕೆ ಆಗುತ್ತಿದಿಯಾ ಎನ್ನುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗುಪ್ತಚರ ಇಲಾಖೆ ಸಿಎಂ ಬಳಿ ಇರುತ್ತದೆ. ರಾಜಕೀಯ ಅಸ್ಥಿರತೆ ಇದ್ದಾಗ ಸಿಎಂ ಯಾವ ರೀತಿ ಬಳಕೆ ಮಾಡುತ್ತಾರೆ ಎನ್ನುವುದು ಮುಖ್ಯ. ತಮ್ಮದೇ ಪಕ್ಷದ ಶಾಸಕರ ಮೇಲೆ ಗುಪ್ತಚರ ಮಾಡುತ್ತಾರೋ. ಅಥವಾ ನೇರವಾಗಿ ಸಂಪರ್ಕ ಮಾಡುತ್ತಾರೋ ಅನ್ನುವುದರ ಮೇಲೆ ನಿರ್ಧಾರ ಆಗಲಿದೆ ಎಂದು ಹೇಳಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.