2026-03-07 03:00:22

Devdutt Padikkal | ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್‌ ಪಡಿಕ್ಕಲ್ | Speed News Kannada

Devdutt Padikkal | ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್‌ ಪಡಿಕ್ಕಲ್ | Speed News Kannada

ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಲಕ್ಷ್ಮೀನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉತ್ತರಾಖಂಡ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದರು.ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಉತ್ತಮ ಆರಂಭ ಪಡೆದಿರಲಿಲ್ಲ. ಕೆಎಲ್ ರಾಹುಲ್ ಜೊತೆ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕ್ರೀಸ್ ಗೆ ಆಗಮಿಸಿದ ದೇವದತ್‌ ಪಡಿಕ್ಕಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.ಕೆಎಲ್ ರಾಹುಲ್ ಜೊತೆಗೂಡಿ ಇನಿಂಗ್ಸ್ ಕಟ್ಟಿದ ದೇವದತ್ ಪಡಿಕ್ಕಲ್ 2ನೇ ವಿಕೆಟ್‌ಗೆ 278 ರನ್ ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ 211 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 11 ಫೋರ್ ಗಳೊಂದಿಗೆ 141 ರನ್ ಬಾರಿಸಿದ್ದ ಕೆಎಲ್ ರಾಹುಲ್ ಔಟಾದರು.ಮತ್ತೊಂದೆಡೆ ಜವಾಬ್ದಾರಿಯುತ ಇನಿಂಗ್ಸ್ ಮುಂದುವರೆಸಿದ ದೇವದತ್ ಪಡಿಕ್ಕಲ್ 288 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ದ್ವಿಶತಕದ ಬೆನ್ನಲ್ಲೇ ಬಿರುಸಿನ ಬ್ಯಾಟಿಂಗ್ ಗೆ ಮುಂದಾದ ಪಡಿಕ್ಕಲ್ 330 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 29 ಫೋರ್ ಗಳೊಂದಿಗೆ 232 ರನ್ ಬಾರಿಸಿ ಔಟಾದರು.ದೇವದತ್‌ ಪಡಿಕ್ಕಲ್ ಅವರ ಈ ಭರ್ಜರಿ ಡಬಲ್ ಸೆಂಚುರಿ ನೆರವಿನೊಂದಿಗೆ ಕರ್ನಾಟಕ ತಂಡ 121 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 501 ರನ್ ಕಲೆಹಾಕಿದೆ. ಇದೀಗ ಸ್ಮರಣ್ ರವಿಚಂದ್ರನ್ ಹಾಗೂ ಕೃತಿಕ್ ಕೃಷ್ಣ ಬ್ಯಾಟಿಂಗ್ ಮುಂದುವರೆಸಿದ್ದು, ಕರ್ನಾಟಕ ಬೃಹತ್ ಮೊತ್ರ ಪೇರಿಸಿ ದ್ವಿತೀಯ ದಿನದಾಟದಲ್ಲೇ ಡಿಕೇರ್ ಘೋಷಿಸುವ ಸಾಧ್ಯತೆಯಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.