2026-06-25 02:09:44

Dharwad Former MLAs sons burnt body found in car| ಧಾರವಾಡ ಕಾರಿನಲ್ಲಿ ಮಾಜಿ ಶಾಸಕನ ಪುತ್ರನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ | Speed News Kannada

Dharwad Former MLAs sons burnt body found in car| ಧಾರವಾಡ ಕಾರಿನಲ್ಲಿ ಮಾಜಿ ಶಾಸಕನ ಪುತ್ರನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ | Speed News Kannada

ಧಾರವಾಡ: ದಟ್ಟಾರಣ್ಯದ ಪ್ರದೇಶದಲಿ ಕಾರಿನಲ್ಲಿ ಮಾಜಿ ಶಾಲಿಸಕರೊಬ್ಬರ ಪುತ್ರನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ರಾಮಾಪುರ ಬಳಿ ನಡೆದಿದೆ.
ರಾಮಾಪುರ ಬಳಿಯ ದಟ್ಟ ಕಾಡಿನಲ್ಲಿ ನಿಂತಿದ್ದ ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಉಡಕೇರಿ ಗ್ರಾಮದ ನಿವಾಸಿಯಾಗಿರುವ ರಾಜು ಬೋಳಶೆಟ್ಟಿ ಅವರ ಮೃತದೇಹ ಅವರದ್ದೇ ಕಾರನಲ್ಲಿ ಸಂಪೂರ್ಣವಾಗಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರು ಕೂಡ ಸುಟ್ಟು ಹೋಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.