2026-03-07 04:58:56

Did the BJP government give land to the RSS office | ಬಿಜೆಪಿ ಸರ್ಕಾರ ಆರ್ ಎಸ್ಎಸ್ ಕಚೇರಿಗೆ ಭೂಮಿ ಕೊಟ್ಟಿಲ್ಲವೇ ಡಿಸಿಎಂ ಶಿವಕುಮಾರ್‌ ತಿರುಗೇಟು | Speed News Kannada

Did the BJP government give land to the RSS office | ಬಿಜೆಪಿ ಸರ್ಕಾರ ಆರ್ ಎಸ್ಎಸ್ ಕಚೇರಿಗೆ ಭೂಮಿ ಕೊಟ್ಟಿಲ್ಲವೇ ಡಿಸಿಎಂ ಶಿವಕುಮಾರ್‌ ತಿರುಗೇಟು | Speed News Kannada

ಬೆಂಗಳೂರು: ಬಿಜೆಪಿ ಅವಧಿಯಲ್ಲಿ ವಿವಿಧ ಸಂಘ ಸಂಸ್ಥೆಗಳಿಗೆ ಸರ್ಕಾರಿ ಭೂಮಿ ನೀಡಲಾಗಿದೆ. ಹಾಗೆಯೇ ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಕಾಂಗ್ರೆಸ್‌ ಭವನಗಳನ್ನು ಕಟ್ಟಲು ಸರ್ಕಾರಿ ಜಮೀನು ಬಳಸಿಕೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಮರ್ಥಿಸಿಕೊಂಡಿದ್ದಾರೆ. 
ಬೆಂಗಳೂರಿನಲ್ಲಿ ಇಂದು ಬಿಜೆಪಿ ಮುಖಂಡರ ಆರೋಪಗಳಿಗೆ ಉತ್ತರಿಸಿದ ಅವರು ಖಂಡಿತವಾಗಿ ನಾವು ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಾಗ ಬಳಸಿಕೊಳ್ಳುತ್ತಿದ್ದೇವೆ. ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆಯ ಶತಮಾನೋತ್ಸವ ಹಿನ್ನೆಲೆಯಲ್ಲಿ 100 ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಮುಂದಾಗಿದ್ದೇವೆ. 5-10 ಸಾವಿರ ಚದರ ಅಡಿಗಳಷ್ಟು ಜಾಗವನ್ನು ಮಂಜೂರು ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ತಪ್ಪಿಲ್ಲ ಎಂದರು.
ಬಿಜೆಪಿ ಆಡಳಿತ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ 100ಕ್ಕೂ ಹೆಚ್ಚು ಭಾಗಗಳಲ್ಲಿ ವಿವಿಧ ಟ್ರಸ್ಟ್ ಗಳಿಗೆ ಜಾಗ ನೀಡಲಾಗಿದೆ. ಚಾಣಾಕ್ಯ ವಿವಿಗೆ ನೀಡಿರುವ ಜಾಗ ಪ್ರತಿ ಎಕರೆಗೆ 10 ಕೋಟಿ ರೂ.  ಬೆಲೆ ಭಾಳುತ್ತದೆ. ಆದರೆ ಬಿಜೆಪಿ ಸರ್ಕಾರ ಪ್ರತಿ ಎಕರೆಗೆ 50 ಲಕ್ಷ ರೂ. ದರದಲ್ಲಿ 100 ಎಕರೆ ಜಾಗ ಮಂಜೂರು ಮಾಡಿದೆ. ಬಿಜೆಪಿಯವರೇ  ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ಜಾಗ ಮಂಜೂರು ಮಾಡದೇ, ಆರ್ ಎಸ್ಎಸ ಕಚೇರಿ ಹೇಗೆ ನಿರ್ಮಾಣವಾಯಿತು? ಸದಾಶಿವನಗರದಲ್ಲಿ ನಮ್ಮ ಮನೆಯ ಪಕ್ಕದಲ್ಲಿರುವ ಪಾರ್ಕ್ ಅನ್ನು ವೆಲ್ ನೆಸ್ ಸೆಂಟರ್ ನ ಯೋಗ ಕಚೇರಿಗೆ ನೀಡಿದ್ದು, ಕಚೇರಿ ಕಟ್ಟಿಕೊಂಡಿದ್ದಾರೆ. ಇಂತಹ ನೂರಾರು ಉದಾಹರಣೆಗಳನ್ನು ನಾನು ನೀಡಬಲ್ಲೆ ಎಂದರು. 
ಬಿಜೆಪಿ ಮುಖಂಡರು ನಮಗೆ ಬೋಧನೆ ಮಾಡುವ ಅಗತ್ಯವಿಲ್ಲ. ನಾವು ನಮ್ಮ ಪಕ್ಷದ ದೇವಾಲಯವನ್ನು ಕಟ್ಟಲು ಈ ತೀರ್ಮಾನಕ್ಕೆ ಬಂದಿದ್ದೇವೆ. ಇದು ನಮ್ಮ ಕರ್ತವ್ಯ. ನಾನು ಇದನ್ನು ಮಾಡಿಯೇ ಮಾಡುತ್ತೇನೆ. ಎಲ್ಲಾ ಮಾನದಂಡಗಳು, ಅರ್ಹತೆ ಆಧಾರದ ಮೇಲೆ ನಾವು ಈ ಜಾಗವನ್ನು ಮಂಜೂರು ಮಾಡುತ್ತಿದ್ದೇವೆ. ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುವುದಾದರೆ ಹೋಗಲಿ ಎಂದು ತಿರುಗೇಟು ನೀಡಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.