2026-06-25 02:39:09

Did the police join hands with the Murder Accused | ಕೊ*ಲೆ ಆರೋಪಿ ಜೊತೆ ಕೈಜೋಡಿಸಿದ್ರಾ ಪೊಲೀಸ್ ವರ್ತೂರು ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಗಂಭೀರ ಆರೋಪ | Speed News Kannada

Did the police join hands with the Murder Accused | ಕೊ*ಲೆ ಆರೋಪಿ ಜೊತೆ ಕೈಜೋಡಿಸಿದ್ರಾ ಪೊಲೀಸ್ ವರ್ತೂರು ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಗಂಭೀರ ಆರೋಪ | Speed News Kannada

ಬೆಂಗಳೂರು: ನಗರದ ವರ್ತೂರು ಠಾಣೆಗೆ ಸಂಬಂಧಿಸಿದ ಹತ್ಯೆ ಪ್ರಕರಣದಲ್ಲಿ ಗಂಭೀರ ಪ್ರಶ್ನೆಗಳು ಉದ್ಭವವಾಗಿವೆ. ಇನ್ಸ್‌ಪೆಕ್ಟರ್ ಯೋಗಾನಂದ್ ಅವರು ಆರೋಪಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ವಿಚಾರಣೆಯನ್ನು ದುರ್ಬಲಗೊಳಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಕಾನೂನು ವಿಧ್ಯಾರ್ಥಿ ರವೆನ್ತ್ ಸಾವು ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕುಟುಂಬಸ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2024ರ ಸೆಪ್ಟೆಂಬರ್ 18ರಂದು ತಮಿಳುನಾಡಿನ ಬಾಗಲೂರು ಪ್ರದೇಶದಲ್ಲಿ ಸ್ಟಾಲಿನ್ ಎಂಬ ಸ್ನೇಹಿತನ ಮೇಲೆ ಹಲ್ಲೆ ನಡೆದಿತ್ತು ಈ ಸಂಬಂಧ ಹಲ್ಲೆ ಪ್ರಕರಣ ದಾಖಲಿಸಲು ರೇವಂತ್ ಮುಂದಾದ ವೇಳೆ, ರೇವಾ ತಂಡದಿಂದ ಕೇಸ್ ಹಾಕದಂತೆ ಆತನಿಗೆ ಒತ್ತಡವಿತ್ತು ಎನ್ನಲಾಗಿದೆ. ಈ ವೇಳೆ ಮಾತುಕತೆ ನೆಪದಲ್ಲಿ ಕರೆಸಿ ರೇವಂತ್ ಚಿಕ್ಕಪ್ಪನ ಎದುರೇ ಆತನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು.
ಈ ಪ್ರಕರಣದಲ್ಲಿ ನಿಗದಿತ ಅವಧಿಯಲ್ಲಿ ಚಾರ್ಜ್‌ ಶೀಟ್ ಸಲ್ಲಿಕೆಯಾಗದೆ ಆರೋಪಿಗಳು ಜಾಮೀನು ಪಡೆದಿದ್ದಾರೆ. ನ್ಯಾಯಾಲಯದ ಸೂಚನೆಗಳ ಅನುಸರಣೆ ಕುರಿತು ಸಹ ಪ್ರಶ್ನೆಗಳು ಎದ್ದಿವೆ. ಕುಟುಂಬದವರು ಮತ್ತು ಸಾಕ್ಷಿಗಳಿಗೆ ಭದ್ರತೆ ಒದಗಿಸಿಲ್ಲವೆಂಬ ಆರೋಪ ಕೇಳಿಬಂದಿದ್ದು, ಮೇಲಧಿಕಾರಿಗಳಿಂದ ಸಮಗ್ರ ತನಿಖೆ ನಡೆಯಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.