2026-04-23 11:00:41

Did this actress lose her life for a reason | ಒಂದು ಕಾರಣದಿಂದಲೇ ಜೀವ ಕಳೆದುಕೊಂಡ್ರಾ ಈ ನಟಿ | Speed news kannada

Did this actress lose her life for a reason | ಒಂದು ಕಾರಣದಿಂದಲೇ ಜೀವ ಕಳೆದುಕೊಂಡ್ರಾ ಈ ನಟಿ | Speed news kannada

ತಮಿಳು ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಜನಪ್ರಿಯ ಕಿರುತೆರೆ ನಟಿ ಸುಭಾಷಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸನ್ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ 'ಕಾಯಲ್' ಧಾರಾವಾಹಿಯಲ್ಲಿ ಸುಭಾಷಿಣಿ ಪ್ರಮುಖ ಪಾತ್ರ ವಹಿಸಿದ್ದರು. ಇನ್ನು ಈ ನಟಿಯ ಹಠಾತ್ ಸಾವು ಇದೀಗ ಇಡೀ ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. ಜೊತೆಗೆ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಅವರು ತಮ್ಮ ಪತಿಯೊಂದಿಗೆ ಜಗಳವಾಡಿದ್ದರು ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿರುವ ಸುಭಾಷಿಣಿ, ನಿನ್ನೆ ರಾತ್ರಿ ತಮ್ಮ ಪತಿಯೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡಿದ್ದರಂತೆ. ಈ ಸಂಭಾಷಣೆಯ ಸಮಯದಲ್ಲಿ, ಇಬ್ಬರೂ ಕೌಟುಂಬಿಕ ವಿಷಯಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದಾರೆ ಎಂದು ಹೇಳಲಾಗುತ್ತಿದೆ. 
ಇದು ನಟಿಯ ಮಾನಸಿಕ ಒತ್ತಡಕ್ಕೆ ಕಾರಣವಾಗಿ, ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ, ಸುಭಾಷಿಣಿಯ ಶವವನ್ನು ಹೊರತೆಗೆದು ತನಿಖೆ ಆರಂಭಿಸಿದ್ದಾರೆ. ಸಾವಿಗೂ ಮುನ್ನ ತನ್ನ ಪತಿಯೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡಿರುವುದು ತಿಳಿದುಬಂದಿದೆ ಎಂದು ಹೇಳಲಾಗುತ್ತಿದೆ. ನಟಿ ಸುಭಾಷಿಣಿ ಅವರ ಫೇಸ್‌ಬುಕ್ ಪ್ರೊಫೈಲ್ ಪ್ರಕಾರ, ನಟನಾ ಕ್ಷೇತ್ರಕ್ಕೆ ಪ್ರವೇಶಿಸುವ ಮೊದಲು, ಅವರು ಹಲವಾರು ಟಿವಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಶ್ರೀಲಂಕಾದ ಪ್ರವಾಸೋದ್ಯಮ ಸಚಿವಾಲಯದ ಪ್ರವರ್ತಕರಾಗಿಯೂ ಕೆಲಸ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಶೂಟಿಂಗ್ ಸ್ಥಳದಲ್ಲಿ ತುಂಬಾ ಆಕ್ಟಿವ್ ಆಗಿದ್ದ ಸುಭಾಷಿಣಿ ಈ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳಲು ಹೇಗೆ ಸಾಧ್ಯ ಎಂದು ಸಹ ಕಲಾವಿದರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಿನಲ್ಲಿ ನಟಿ ಸುಭಾಷಿಣಿ ನಿಧನದಿಂದ ಇಡೀ ಕಾಲಿವುಡ್ ಉದ್ಯಮ ತೀವ್ರ ಆಘಾತಕ್ಕೊಳಗಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.