2026-06-08 03:50:52

diesel,petrol, cng price hike;opposition parties criticise pm modi| ಡೀಸೆಲ್‌, ಪೆಟ್ರೋಲ್‌, ಸಿಎನ್‌ ಜಿ ಬೆಲೆ ಹೆಚ್ಚಳ; ಪ್ರಧಾನಿ ಮೋದಿ ವಿರುದ್ಧ ತಿರುಗಿ ಬಿದ್ದ ವಿಪಕ್ಷಗಳು| Speed News Kannada

diesel,petrol, cng price hike;opposition parties criticise pm modi| ಡೀಸೆಲ್‌, ಪೆಟ್ರೋಲ್‌, ಸಿಎನ್‌ ಜಿ ಬೆಲೆ ಹೆಚ್ಚಳ; ಪ್ರಧಾನಿ ಮೋದಿ ವಿರುದ್ಧ ತಿರುಗಿ ಬಿದ್ದ ವಿಪಕ್ಷಗಳು| Speed News Kannada

ನವದೆಹಲಿ: ದೇಶಾದ್ಯಂತ ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ರೂ.3 ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿವೆ ಎಂದು ಹೇಳಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ ಲೀಟರ್‌ಗೆ ರೂ.94.77 ನಿಂದ ರೂ.97.77ಕ್ಕೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.87.67 ನಿಂದ ರೂ.90.67ಕ್ಕೆ ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ರೂ.106.22ರೂ. ಡೀಸೆಲ್ ದರ ಪ್ರತಿ ಲೀಟರ್ ಗೆ ರೂ.94.09 ನಿಗದಿಯಾಗಿದೆ. ಸಿಎನ್‌ ಜಿ ಬೆಲೆಯನ್ನೂ ಕೇಂದ್ರ ಸರ್ಕಾರ 2 ರೂ ಹೆಚ್ಚಳ ಮಾಡಿದೆ. ಪ್ರತಿಕೆಜಿ ಸಿಎನ್‌ ಜಿ ಗೆ 79.09 ರೂ ಏರಿಕೆ ಮಾಡಲಾಗಿದೆ.

ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಳದ ಬೆನ್ನಲ್ಲೇ ಕೇಂದ್ರ ಸರ್ಕಾರ ಶ್ರೀಸಾಮಾನ್ಯನಿಗೆ ಮತ್ತೊಂದು ಶಾಕ್‌ ನೀಡಿದೆ.

ಪ್ರತಿಪಕ್ಷಗಳ ಆಕ್ರೋಶ: ಇಂಧನ ಮತ್ತು ಸಿಎನ್‌ ಜಿ ಬೆಲೆ ಹೆಚ್ಚಳಕ್ಕೆ ಪ್ರತಿಪಕ್ಷಗಳು ಪ್ರಧಾನಿ ಮೋದಿ ವಿರುದ್ಧ ತಿರುಗಿ ಬಿದ್ದಿವೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬೆಲೆ ಏರಿಕೆ ಮಿಸ್ಟರ್ ನರೇಂದ್ರ ಮೋದಿ ಕೊಡುಗೆಯಾಗಿದೆ. ಅವರುವಿದೇಶಗಳ ಜೊತೆ ಸರಿಯಾದ ಬಾಂಧವ್ಯ ಹೊಂದಿಲ್ಲ. ಉತ್ತಮ ಸಂಬಂಧ ಇಟ್ಟುಕೊಳ್ಳುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ದ ಡಿಸಿಎಂ ಡಿಕೆಶಿ ಸರ್ಕಾರದ ತಪ್ಪು ನೀತಿಗಳಿಂದ ದರ ಹೆಚ್ಚಳವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಆರೋಪ ಮಾಡಿದ್ದಾರೆ.

 

 

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.