2026-04-24 02:52:52

Digant to star in Rudra Kaala | ರುದ್ರ ಕಾಲ ಚಿತ್ರಕ್ಕೆ ದಿಗಂತ್ ನಾಯಕ, ಶೀರ್ಷಿಕೆ ಅನಾವರಣ ಮಾಡಿ ಶುಭ ಕೋರಿದ ಸಮಂತ | Speed news kannada

Digant to star in Rudra Kaala | ರುದ್ರ ಕಾಲ ಚಿತ್ರಕ್ಕೆ ದಿಗಂತ್ ನಾಯಕ, ಶೀರ್ಷಿಕೆ ಅನಾವರಣ ಮಾಡಿ ಶುಭ ಕೋರಿದ ಸಮಂತ | Speed news kannada

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ದಿಗಂತ್ ಅಭಿನಯದ ನೂತನ ಚಿತ್ರ "ರುದ್ರ ಕಾಲ". ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಸ್ಟಾರ್ ಹಿರೋಯಿನ್ ಸಮಂತ ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ರಮೇಶ್ ನಾಯ್ಕ್ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಗೋಪಿ ಅವರು ನಿರ್ದೇಶಿಸುತ್ತಿದ್ದಾರೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಮುಹೂರ್ತ ಸಮಾರಂಭ ಇದೇ ತಿಂಗಳ 22 ರಂದು ನೆರವೇರಲಿದೆ.

ನಮ್ಮ ಡೈರೆಕ್ಟರ್ ಗೋಪಿ ಅವರು ಕಥೆ ಹೇಳುತ್ತಿದ್ದಾಗಲೇ ಈ ಚಿತ್ರದಲ್ಲಿ ನಟಿಸಬೇಕೆಂದು ನಿರ್ಧಾರ ಮಾಡಿದೆ.  ಹಾಗೆಯೇ ನಮ್ಮ "ರುದ್ರ ಕಾಲ" ಚಿತ್ರದ ಟೈಟಲ್ ಸಮಂತ ಅವರ ಕೈಯಿಂದ ರಿಲೀಸ್ ಆಗಿರುವುದು ತುಂಬಾ ಸಂತೋಷವಾಗಿದೆ. ಚಿತ್ರ ಎಲ್ಲರಿಗೂ ಮೆಚ್ಚುಗೆಯಾಗುವ ಭರವಸೆ ಇದೆ ಎಂದು ತಿಳಿಸಿರುವ‌ ನಾಯಕ ದಿಗಂತ್, ನಿರ್ದೇಶಕ  ಗೋಪಿ, ನಿರ್ಮಾಪಕ ರಮೇಶ್ ನಾಯ್ಕ್ ಮತ್ತು ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. 

ನಮ್ಮ ಚಿತ್ರದ ಶೀರ್ಷಿಕೆ ಅನಾವರಣ ಮಾಡಿಕೊಟ್ಟ ಸಮಂತ ಅವರಿಗೆ ಧನ್ಯವಾದ. ಇದು ನಮ್ಮ ಚಿತ್ರದ ಶುಭಾರಂಭ ಎಂದು ಭಾವಿಸುತ್ತೇನೆ. "ರುದ್ರ ಕಾಲ" ಚಿತ್ರದ ಚಿತ್ರೀಕರಣ ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಏಕಕಾಲಕ್ಕೆ ನಡೆಯಲಿದೆ. ಒಂದೇ ಹಂತದ ಚಿತ್ರೀಕರಣ ನಡೆಸಿ‌ ಅದಷ್ಟು ಬೇಗ ತೆರೆಗೆ ತರುವ ಯೋಚನೆ ಇದೆ. ಇದು ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಕಥೆ ಕೇಳಿ ಮೆಚ್ಚಿಕೊಂಡು ನಾಯಕನಾಗಿ ನಟಿಸುತ್ತಿರುವ ದಿಗಂತ್ ಹಾಗೂ ನಿರ್ಮಾಣ ಮಾಡುತ್ತಿರುವ ರಮೇಶ್ ನಾಯ್ಕ್ ಅವರಿಗೆ ನನ್ನ ಧನ್ಯವಾದ ಎನ್ನುತ್ತಾರೆ ನಿರ್ದೇಶಕ ಗೋಪಿ.

ನಿರ್ಮಾಪಕ ರಮೇಶ್ ನಾಯ್ಕ್ ಚಿತ್ರದ ಬಗ್ಗೆ ಮಾತನಾಡುತ್ತಾ, ಡೈರೆಕ್ಟರ್ ಗೋಪಿ ಹೇಳಿದ ಸ್ಕ್ರಿಪ್ಟ್ ನನಗೆ ಫ್ರೆಶ್ ಆಗಿ ಅನಿಸಿತು. ನಮ್ಮ ಪ್ರೊಡಕ್ಷನ್‌ನಲ್ಲಿ ಇಂಥ ಚಿತ್ರ ಬರುತ್ತಿರುವುದು ನನಗೆ ತುಂಬಾ ಸಂತೋಷವಾಗಿದೆ. ಟೈಟಲ್ ರಿಲೀಸ್ ಮಾಡಿದ ನಟಿ ಸಮಂತ ಹಾಗೂ ನಾಯಕ ದಿಗಂತ್ ಅವರಿಗೆ ಧನ್ಯವಾದ ಎಂದರು.

ರಮೇಶ್ ಅವರು ಕಥೆ ಬರೆದಿರುವ ಈ ಚಿತ್ರಕ್ಕೆ ಕ್ರಿಸ್ಟೋಫರ್ ಜೋಸೆಫ್ ಛಾಯಾಗ್ರಹಣ ಮಾಡುತ್ತಿದ್ದಾರೆ. ಲೈನ್ ಪ್ರೊಡ್ಯೂಸರ್ ಆಗಿ ನವೀನ್ ಹಾಗೂ  ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿ ಶಿವರಾಜ್ ಕಾರ್ಯ ನಿರ್ವಹಿಸುತ್ತಿದ್ದಾರೆ.  ರಮೇಶ್ ಕೆ ಪೂಜಾರಿ ಈ ಚಿತ್ರದ ಸಹ ನಿರ್ದೇಶಕರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.