2026-03-07 03:34:38

Digital Arrest | ಡಿಜಿಟಲ್ ಅರೆಸ್ಟ್ ತನಿಖೆಗೆ ಸುಪ್ರೀಂಕೋರ್ಟ್ ಸೂಚನೆ | Speed News Kannada

Digital Arrest | ಡಿಜಿಟಲ್ ಅರೆಸ್ಟ್ ತನಿಖೆಗೆ ಸುಪ್ರೀಂಕೋರ್ಟ್ ಸೂಚನೆ | Speed News Kannada

ನವದೆಹಲಿ: ದೇಶಾದ್ಯಂತ ನಡೆಯುತ್ತಿರುವ ಡಿಜಿಟಲ್ ಅರೆಸ್ಟ್ ಪ್ರಕರಣಗಳನ್ನು ಪತ್ತೆ ಹಚ್ಚಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಸೂಚಿಸಿದೆ. ಜೊತೆಗೆ ಡಿಜಿಟಲ್ ಅರೆಸ್ಟ್ ಪ್ರಕರಣಗಳ ತನಿಖೆ ಮುಂದುವರೆಸಲು ಸಿಬಿಐಗೆ ಅನುಮತಿ ನೀಡುವಂತೆ ಗುಜರಾತ್ ಮತ್ತು ದೆಹಲಿ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಸಿದೆ. ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ಗ್ರಾಹಕರಿಗೆ ಪರಿಹಾರ ವಿತರಿಸಲು ಆರ್ ಬಿ ಐ ಮತ್ತು ದೂರ ಸಂಪರ್ಕ ಇಲಾಖೆ ಜಂಟಿಯಾಗಿ ಚೌಕಟ್ಟು ರೂಪಿಸುವಂತೆಯೂ ಸುಪ್ರೀಂ ಕೋರ್ಟ್ ಸೂಚಿಸಿದೆ.
ಡಿಜಿಟಲ್ ವಂಚನೆಗೆ ಒಳಗಾದವರಿಗೆ ಪರಿಹಾರ ವಿತರಿಸಲು ಅಮಿಕಸ್ ಕ್ಯೂರಿ ಮಂಡಿಸಿದ್ದ ಸಲಹೆಗಳನ್ನು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಡಿಸೆಂಬರ್ 16ರಂದು ಸೂಚನೆ ನೀಡಿತ್ತು. ಸೈಬರ್ ಅಪರಾಧಿಗಳು ದೇಶದಿಂದ ದೋಚುತ್ತಿರುವ ಅಪಾರ ಪ್ರಮಾಣದ ಹಣದ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. 
ಸೈಬರ್ ಅಪರಾಧಿಗಳ ಜಾಡನ್ನು ಪತ್ತೆ ಹಚ್ಚಲು ಮತ್ತು ಅಕ್ರಮ ವಹಿವಾಟು ನಡೆಯುವ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಏಕೆ ಬಳಸುತ್ತಿಲ್ಲ ಎಂದು ಆರ್ ಬಿ ಐಗೆ ಸುಪ್ರೀಂಕೋರ್ಟ್ ಪ್ರಶ್ನಿಸಿತ್ತು. ಡಿಜಿಟಲ್ ವಂಚನೆ ಪ್ರಕರಣಗಳಲ್ಲಿ , ಸೈಬರ್ ಅಪರಾಧಿಗಳು ಮಾತ್ರವಲ್ಲ ಬ್ಯಾಂಕ್ ಅಧಿಕಾರಿಗಳ ಶಾಮೀಲು ಹಾಗೂ ನಿರ್ಲಕ್ಷವನ್ನು ಆಗಾಗ್ಗೆ ಪರಿಶೀಲನೆಗೆ ಒಳಪಡಿಸುತ್ತಿರಬೇಕು. ಈ ನಿಟ್ಟಿನಲ್ಲಿ ಆರ್ ಬಿ ಐ ಬ್ಯಾಂಕುಗಳಿಗೆ ಸೂಚನೆ ನೀಡಬೇಕು ಎಂದು ನ್ಯಾಯಪೀಠ ಹೇಳಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.