2026-06-08 02:44:03

Disgrace to the God during the Tulunad Dhiwanartana | ತುಳುನಾಡಿನ ಧೈವನರ್ತನದ ವೇಳೆ ದೈವಕ್ಕೆ ಅವಮಾನ | Speed News Kannada

Disgrace to the God during the Tulunad Dhiwanartana | ತುಳುನಾಡಿನ ಧೈವನರ್ತನದ ವೇಳೆ ದೈವಕ್ಕೆ ಅವಮಾನ | Speed News Kannada

ಮಂಗಳೂರು : ಮಂಗಳೂರಲ್ಲಿ ದೈವಾರಾಧನೆ ವೇಳೆ ಅಪಚಾರ ಆಗಿರೋ ಬಗ್ಗೆ ವರದಿಯಾಗಿದ್ದು, ತುಳುನಾಡಿನ ಪ್ರಸಿದ್ದ ದೈವಾರಾಧನೆಯ ದೈವ ನರ್ತನ  ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಮಂಗಳೂರಿನ ಪ್ರಸಿದ್ದ ದೈವಸ್ಥಾನದಲ್ಲಿ ನಡೆದ ನೇಮೋತ್ಸವದ ವೇಳೆ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಘಟನೆ ತುಳುನಾಡಿನ ದೈವಾರಾಧನೆ ಪರಂಪರೆಯ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಕಳೆದ ಜನವರಿ 31ರಂದ ಪ್ರಸಿದ್ದ ದೈವಕ್ಷೇತ್ರದಲ್ಲಿ ಶ್ರೀ ಜಾರಂದಾಯ ಹಾಗೂ ಬಂಟ ದೈವಕ್ಕೆ ನೇಮೋತ್ಸವ ನಡೆದಿತ್ತು. ಸಂಪ್ರದಾಯದಂತೆ ದೈವ ನರ್ತನ ಸೇವೆಯನ್ನು ನಲಿಕೆ ಪರವ ಹಾಗೂ ಪಂಬದ ಸಮುದಾಯದವರು ಮಾತ್ರ ಮಾಡಬೇಕು ಎಂಬ ನಿಯಮವಿದೆ. ಆದರೆ ಈ ಬಾರಿ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ನರ್ತನ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ನರ್ತನ ಮಾಡಿದ ಯುವಕನ ತಂದೆ ಪಂಬದ ಸಮುದಾಯದವರಾಗಿದ್ದು, ತಾಯಿ ಕ್ರೈಸ್ತ ಧರ್ಮದವರು ಎಂಬ ವಿಚಾರ ಇದೀಗ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.