2026-06-03 11:44:51

ಡಿಕೆ ಶಿವಕುಮಾರ್‌ ಪ್ರಮಾಣ ವಚನ; ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ|Speed News Kannada

ಡಿಕೆ ಶಿವಕುಮಾರ್‌ ಪ್ರಮಾಣ ವಚನ; ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ|Speed News Kannada

ಬೆಂಗಳೂರು:ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಲವೇ ಕ್ಷಣಗಳಲ್ಲಿ ಡಿ.ಕೆ.ಶಿವಕುಮಾರ್‌ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ರಾಜ್ಯದ 230 ಸರ್ಕಾರಿ ಬಸ್‌‍ ನಿಲ್ದಾಣಗಳಲ್ಲಿ ನೇರ ಪ್ರಸಾರವಾಗಲಿದೆ. ಸಾರ್ವಜನಿಕರ ಅನುಕೂಲಕ್ಕೆ ಈ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭವು ಸಾರ್ವಜನಿಕರಿಗೂ ತಲುಪಬೇಕು ಎಂಬ ಉದ್ದೇಶದಿಂದ ಆಯ್ದ 230 ಸರ್ಕಾರಿ ಬಸ್‌‍ ನಿಲ್ದಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ಜನತೆಗೆ ಈ ಮಹತ್ವದ ಕಾರ್ಯಕ್ರಮವನ್ನು ತಲುಪಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್‌ ಸಂಸ್ಥೆಯ ಸಹಯೋಗದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ.

ಬಸ್‌ ಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಸಾಮಾನ್ಯಜನತೆ ಈ ಐತಿಹಾಸಿಕ ಸಮಾರಂಭದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಕೈಗೊಳ್ಳಲಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.