2026-06-04 12:41:55

ಸಿದ್ದರಾಮಯ್ಯ, ಬಿಎಸ್‌ ವೈ, ದೇವೇಗೌಡ ಅವರ ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌ |Speed News Kannada

ಸಿದ್ದರಾಮಯ್ಯ, ಬಿಎಸ್‌ ವೈ, ದೇವೇಗೌಡ ಅವರ ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌ |Speed News Kannada

ಬೆಂಗಳೂರು: ಸಂಜೆ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರು ಇಂದು ಬೆಳಿಗ್ಗೆಯಿಂದ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದಾರೆ. ಆರಂಭದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ನಂತರ ಡಾಲರ್ಸ್‌ ಕಾಲೊನಿಯಲ್ಲಿರುವ ಬಿ ಎಸ್‌ ಯಡಿಯೂರಪ್ಪ ಅವರ ನಿವಾಸಕ್ಕ ಭೇಟಿ ನೀಡಿ ಸನ್ಮಾನಿಸಿದರು. ನಂತರ ಪದ್ಮನಾಭ ನಗರಕ್ಕೆ ಆಗಮಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಜೊತೆ 13 ಜನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದರು. ಯಡಿಯೂರಪ್ಪ ಅವರನ್ನು ರಾಜ್ಯದ ಪ್ರಮುಖ ನಾಯಕ, ಅನುಭವಿ ಹಿರಿಯರು ಎಂದು ಹೇಳಿದರು. ದೇವೇಗೌಡರಿಗೆ ಈಗ ಡಯಾಲಿಸಿಸ್ ಚಿಕಿತ್ಸೆ ನಡೆಯುತ್ತಿದರೂ, ತಮ್ಮನ್ನು ಭೇಟಿ ಮಾಡಲು ಅವರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದರು.

ಸಂಪುಟ ಸೇರಲಿರುವ ಸಚಿವರು:

ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಡಾ.ಜಿ. ಪರಮೇಶ್ವರ್‌ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಇವರ ಜತೆ ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೆ.ಎಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ‌, ಯು.ಟಿ.ಖಾದರ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ಶರಣಪ್ರಕಾಶ್ ಪಾಟೀಲ್, ಬೈರತಿ ಸುರೇಶ್, ಈಶ್ವರ್ ಖಂಡ್ರೆ ಅವರೂ ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವರು. ಮೂವರು ಲಿಂಗಾಯತರು, ಮೂವರು ಪರಿಶಿಷ್ಟ ಜಾತಿ, 1 ವಾಲ್ಮೀಕಿ, 2 ಕುರುಬ, 1 ಮುಸ್ಲಿಂ, 1 ಕ್ರಿಶ್ಚಿಯನ್‌, ಡಿಕೆಶಿ ಸೇರಿ ಮೂವರು ಒಕ್ಕಲಿಗರಿಗೆ ಸಚಿವ ಸ್ಥಾನ ಸಿಕ್ಕಿದೆ.

ಇವರೆಲ್ಲರಿಗೂ ಸ್ವತಃ ಶಿವಕುಮಾರ್‌ ಅವರೇ ದೂರವಾಣಿ ಕರೆ ಮಾಡಿ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಸಂಜೆ 4.05ಕ್ಕೆ ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ವಾದ್ರಾ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕಾಂಗ್ರೆಸ್ ಸಿಎಂಗಳಾದ ವಿ.ಡಿ.ಸತೀಶನ್, ರೇವಂತ ರೆಡ್ಡಿ, ಸುಖವೀಂದರ್ ಸಿಂಗ್ ಸುಖು ಸೇರಿದಂತೆ ಎಐಸಿಸಿ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.