2026-07-01 12:07:18

DK SHIVAKUMAR | ಕಾರ್ಮೆಲ್ ಶಾಲೆಯ ಶಿಕ್ಷಕಿ ಧಾತ್ರಿ ನಿಧನ ಚರ್ಚ್‌ಗೆ ಭೇಟಿ ನೀಡಿ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ | SNK

DK SHIVAKUMAR | ಕಾರ್ಮೆಲ್ ಶಾಲೆಯ ಶಿಕ್ಷಕಿ ಧಾತ್ರಿ ನಿಧನ ಚರ್ಚ್‌ಗೆ ಭೇಟಿ ನೀಡಿ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ | SNK

ಬೆಂಗಳೂರು : ಬಸವೇಶ್ವರನಗರದಲ್ಲಿರುವ ಪ್ರಸಿದ್ಧ ಕಾರ್ಮೆಲ್ ಶಾಲೆಯಲ್ಲಿ ಈ ಹಿಂದೆ ಸೇವೆ ಸಲ್ಲಿಸುತ್ತಿದ್ದ ಹಿರಿಯ ಶಿಕ್ಷಕಿ ಧಾತ್ರಿ ಮೆನೆಂಜಸ್ ಅವರು ಇಹಲೋಕ ತ್ಯಜಿಸಿದ್ದಾರೆ. ತಮ್ಮ ಶಾಲಾ ದಿನಗಳಲ್ಲಿ ತಮಗೆ ವಿದ್ಯೆ ಕಲಿಸಿ ಮಾರ್ಗದರ್ಶನ ನೀಡಿದ್ದ ಪ್ರೀತಿಯ ಗುರುಗಳ ನಿಧನದ ವಾರ್ತೆ ಕೇಳಿ ಮುಖ್ಯಮಂತ್ರಿ ಡಿ.ಕೆ.  ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ. ಇಂದು (ಜೂ.30) ರೆಸಿಡೆನ್ಸಿ ರಸ್ತೆಯಲ್ಲಿರುವ ಐತಿಹಾಸಿಕ ಸೇಂಟ್ ಪ್ಯಾಟ್ರಿಕ್ ಚರ್ಚ್‌ಗೆ ಖುದ್ದಾಗಿ ಭೇಟಿ ನೀಡಿದ ಸಿಎಂ ಡಿಕೆ ಶಿವಕುಮಾರ್, ಅಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದ ಶಿಕ್ಷಕಿ ಧಾತ್ರಿ ಮೆನೆಂಜಸ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಈ ದುಃಖದ ಸಮಯದಲ್ಲಿ ಶಿಕ್ಷಕಿಯ ಕುಟುಂಬಸ್ಥರನ್ನು ಭೇಟಿ ಮಾಡಿ ಅವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜೊತೆಯಲ್ಲಿ ಶಿವಾಜಿನಗರ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಕೂಡ ಉಪಸ್ಥಿತರಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಶಾಲಾ ದಿನಗಳ ನೆನಪನ್ನು ಸ್ಮರಿಸಿದ ಡಿಕೆಶಿ, ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ಕೊಡುಗೆಯಾಗಿ ನೀಡಿದ ಶಿಕ್ಷಕಿಯ ಸೇವೆಯನ್ನು ಗೌರವಪೂರ್ವಕವಾಗಿ ನೆನೆದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.