ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಲೋಕಭವನದಲ್ಲಿ ನಾಳೆ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಸರ್ಕಾರದಿಂದ ರಾಜ್ಯದ ವಿವಿಧ ಮಠಾಧಿಪತಿಗಳನ್ನು ಆಹ್ವಾನಿಸಲಾಗಿದೆ. ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಸರ್ಕಾರದಿಂದಲೇ ಅಧಿಕೃತ ಆಹ್ವಾನ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರಮಾಣ ವಚನ ಸಮಾರಂಭಕ್ಕೆ 55 ಸ್ವಾಮೀಜಿಗಳು, ಫಾದರ್ ಹಾಗೂ ಮೌಲ್ವಿಗಳಿಗೂ ಆಹ್ವಾನ ನೀಡಲಾಗಿದೆ.
ಪಟ್ಟಿಯಲ್ಲಿರುವ ಪ್ರಮುಖ ಸ್ವಾಮೀಜಿಗಳು:
ನಿರ್ಮಲಾನಂದನಾಥ ಮಹಾಸ್ವಾಮಿಗಳು, ಆದಿಚುಂಚನಗಿರಿ ಮಹಾಸಂಸ್ಥಾನಮಠ; ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ, ಸುತ್ತೂರುಮಠ; ಸಿದ್ಧಲಿಂಗ ಮಹಾಸ್ವಾಮಿಗಳು, ಶ್ರೀಸಿದ್ಧಗಂಗಾಮಠ; ನಿಶ್ಚಲಾನಂದನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾಸಂಸ್ಥಾನಮಠ,; ನಂಜಾವಧೂತ ಸ್ವಾಮೀಜಿ, ಪಟ್ಟನಾಯಕನಹಳ್ಳಿ; ಕರಿವೃಷಭ ದೇಶಿಕೇಂದ್ರ ಶಿವಯೋಗಿ ಸ್ವಾಮೀಜಿ, ಕಾಡಸಿದ್ಧೇಶ್ವರಮಠ; ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ತರಳಬಾಳು ಬೃಹನ್ಮಠ; ವಚನಾನಂದ ಸ್ವಾಮೀಜಿ, ಹರಿಹರ; ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ರಂಭಾಪುರಿಪೀಠ; ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ, ಉಜ್ಜಯಿನಿಪೀಠ; ಭೀಮಾಶಂಕರ ಶಿವಾಚಾರ್ಯ ಸ್ವಾಮೀಜಿ, ಕೇದಾರಪೀಠ; ಚೆನ್ನಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ, ಶ್ರೀಶೈಲಪೀಠ; ನಿರಂಜನಾನಂದಪುರಿ ಸ್ವಾಮೀಜಿ, ಕನಕ ಗುರುಪೀಠ; ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಭೋವಿ ಗುರುಪೀಠ; ಶಾಂತವೀರ ಸ್ವಾಮೀಜಿ, ಕುಂಚಟಿಗ ಗುರುಪೀಠ; ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಚಿತ್ರದುರ್ಗ; ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರಮಠ; ರವಿಶಂಕರ ಗುರೂಜೀ, ಆರ್ಟ್ ಆಪ್ ಲಿವಿಂಗ್; ಸ್ವಸ್ತಿಶ್ರೀ ಆಗಮಕೀರ್ತಿ ಭಟ್ಟಾರಕ ಸ್ವಾಮೀಜಿ ಶ್ರವಣಬೆಳಗೊಳ; ವೀರಭದ್ರ ಚನ್ನಮಲ್ಲ ಸ್ವಾಮೀಜಿ, ನಿಡುಮಾಮಡಿಮಠ; ಆನಂದ ಬಿಕ್ಕು, ಮಹಾಬೋಧಿ ಸೊಸಾಯಿಟಿ; * ಆರ್ಚಬಿಷಪ್ ಡಾ.ಪೀಟರ್ ಮಚಾಡೋ, ಕ್ಯಾಥೋಲಿಕ್ ಚರ್ಚ್; ಹಜರತ್ ಹಫೀಜ್ ಡಾ.ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೈನ್, ದರ್ಗಾ ಹಜರತ್ ಖ್ವಾಜಾ ಬಂದೆನವಾಜ್, ಕಲಬುರ್ಗಿ. ಇವರೆಲ್ಲರಿಗೂ ಆಹ್ವಾನ ನೀಡಲಾಗಿದೆ.